Advertisement
ಬೆಂಗಳೂರಿನ ಕಡೆಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಅಡ್ಡಹೊಳೆ ಸೇತುವೆ ದಾಟಿ ಹೋಗುತ್ತಿದ್ದಂತೆ ಸ್ಟೇರಿಂಗ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಟಯರ್ ಪಂಚರ್ ಅಂಗಡಿ ಹಾಗೂ ಹೊಟೇಲ್‌ಗೆ ನುಗ್ಗಿದೆ.
ಘಟನೆಯಿಂದಾಗಿ ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಲಾರಿ ಚಾಲಕ ಕಾರ್ತಿಕ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Related Articles
Advertisement