Advertisement

ಪಾಂಗಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ

08:16 AM Feb 04, 2021 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.

Advertisement

ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ.

ಇದನ್ನೂ ಓದಿ:ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

ಸಿ‌ಲಿಂಡರ್ ಗಳು ಹೆದ್ದಾರಿಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ. ಚಾಲಕ‌ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.‌

ಇದನ್ನೂ ಓದಿ: ಕಾಪು ಲೈಟ್‌ಹೌಸ್‌ ಬಳಿಯ ಮೆಟ್ಟಿಲು ದುರಸ್ತಿ

Advertisement

Udayavani is now on Telegram. Click here to join our channel and stay updated with the latest news.

Next