ಹಜಾರಿಬಾಗ್: ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಶನಿವಾರ ಸೇತುವೆಯಿಂದ ಬಿದ್ದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಳ್ಳವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.
ಹಜಾರಿಬಾಗ್ ಪೊಲೀಸ್ ಅಧೀಕ್ಷಕರ ಪ್ರಕಾರ, ಗಿರಿದಿಹ್‌ನಿಂದ ರಾಂಚಿಗೆ ಹೋಗುತ್ತಿದ್ದ 50 ಮಂದಿ ಪ್ರಯಾಣಿಕರನ್ನು ಹೊತ್ತ ಬಸ್ ಸೇತುವೆಯ ಹಳಿ ಮುರಿದು ತತಿಜಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿವಾನ್ನೆ ನದಿಯಲ್ಲಿ ಬಿದ್ದಿದೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಡಿಎಸ್ಪಿ ಶ್ರೇಣಿಯ ಅಧಿಕಾರಿ ಮತ್ತು ಮೂರು ಪೊಲೀಸ್ ಠಾಣೆಯ ಉಸ್ತುವಾರಿಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಎಸ್ಪಿ ಮನೋಜ್ ರತನ್ ಚೋಥೆ ತಿಳಿಸಿದ್ದಾರೆ.
ಇದನ್ನೂ ಓದಿ: ಚೀತಾದ ವೇಗದಲ್ಲಿ ಚಲಿಸಬೇಕಾಗಿದೆ: ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಪ್ರಧಾನಿ ಚಾಲನೆ
”ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.