ವಿಧಾನಪರಿಷತ್: 156 ತಾಲೂಕುಗಳಲ್ಲಿ ಬರದಿಂದಾಗಿ ಸುಮಾರು 11,384.47 ಕೋಟಿ ರೂ. ಮೊತ್ತದಷ್ಟು ಬೆಳೆನಷ್ಟವಾಗಿದ್ದು, ಕೇಂದ್ರಕ್ಕೆ 2,064 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂಗಾರಿನಲ್ಲಿ 100 ಹಾಗೂ ಹಿಂಗಾರಿನಲ್ಲಿ 156 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ.
ಪರಿಹಾರಕ್ಕಾಗಿ ಈಗಾಗಲೇ ಕೇಂದ್ರಕ್ಕೆ ಮನವಿಮಾಡಲಾಗಿದ್ದು, ಇದಕ್ಕೆ ಪ್ರತಿಯಾಗಿ 949 ಕೋಟಿ ರೂ. ಮಂಜೂರು ಮಾಡಿದೆ. ಆದರೆ ಈ ಮೊತ್ತ ಸಾಕಾಗುವುದಿಲ್ಲ. ಮರುಪರಿಶೀಲನೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು. 84,173 ಫೋಡಿ ಅರ್ಜಿ ಬಾಕಿ: ರಾಜ್ಯದಲ್ಲಿ ಪೋಡಿಗಾಗಿ (ತತ್ಕಾಲ್ ಪೋಡಿ) 84,173 ಅರ್ಜಿಗಳು ಬಾಕಿ ಇವೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಅಪ್ಪಾಜಿಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೋಡಿಗಾಗಿ ಸಲ್ಲಿಕೆಯಾಗುವ ಅರ್ಜಿಗಳು ನಿಯಮಾನುಸಾರ ಅಳತೆಗೆ ಯೋಗ್ಯವಿದ್ದಲ್ಲಿ ಅಂತಹ ಪ್ರಕರಣ ಗಳನ್ನು 30 ದಿನಗಳಲ್ಲಿ ಇತ್ಯರ್ಥಪಡಿಸಲು ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದು ಹೇಳಿದರು. ಬಾಕಿ ಇರುವ ಅರ್ಜಿಗ ಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಸರ್ಕಾರಮೋಜಣಿ ತಂತ್ರಾಂಶದ ಮುಖಾಂತರ ಆನ್‌ಲೈನ್‌ನಲ್ಲೇ ಕಡತಗಳನ್ನು ಅಪ್‌ಲೋಡ್ ಮಾಡಲು ಅವಕಾಶ ಕಲ್ಪಿಸಿದೆ. ಹಾಗೂ ಕಡತಗಳ ಪರಿಶೀಲನೆ ಮತ್ತು ಅನುಮೋದನೆಯನ್ನು ಸಹ ಆನ್‌ಲೈನ್‌ನಲ್ಲೇ ನಿರ್ವಹಿಸಲಾಗುತ್ತಿದೆ. ವಿಳಂಬವನ್ನು ಪ್ರತಿ ಹಂತದಲ್ಲಿ ಆನ್‌ಲೈನ್‌ನಲ್ಲಿ ಪರಿಶೀಲಿಸಿ, ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.