Advertisement
”ಶ್ರೀ ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.” ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
”ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ರಾತ್ರಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು.
Related Articles
Advertisement