Advertisement
ಸರಕಾರ ಮದ್ಯ ಮಾರಾಟವನ್ನು ಕೇವಲ ಆರ್ಥಿಕ ದೃಷ್ಟಿಯಿಂದ ಮಾತ್ರ ಪರಿಗಣಿಸುತ್ತಿದೆ. ಆದರೆ ಇದರಿಂದ ಸಮಾಜದಲ್ಲಿ ಆಗುವ ಅನಾಹುತಗಳು, ಕೌಟುಂಬಿಕ ನೆಮ್ಮದಿ ಹಾಳು, ಅಪರಾಧ ಪ್ರಕರಣ, ಅಪಘಾತಗಳ ಸಂಖ್ಯೆ, ಕುಡಿತದಿಂದ ಆರೋಗ್ಯ ಹಾಳು ಮಾಡಿಕೊಂಡವರ ಆರೋಗ್ಯಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಕರ್ನಾಟಕ ಮತ್ತು ಆಯಷ್ಮಾನ್ ಭಾರತದಂಥ ಯೋಜನೆಗಳ ಅಡಿಯಲ್ಲಿ ಮಾಡುವ ವೆಚ್ಚ ಮದ್ಯ ಮಾರಾಟದಿಂದ ಬರುವ ಆದಾಯಕ್ಕಿಂತ ಎರಡು ಪಟ್ಟು ಹೆಚ್ಚು ಎನ್ನುವುದು ತಜ್ಞರ ಅಭಿಪ್ರಾಯ.
ಮದ್ಯ ಮಾರಾಟದಿಂದ ಸರಕಾರ ಗಳಿಸುವ ಆದಾಯಕ್ಕಿಂತ ಮದ್ಯಪಾನಿಗಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮೊತ್ತ ಖರ್ಚು ಮಾಡುತ್ತದೆ ಎಂದು ನಿಮ್ಹಾನ್ಸ್ ನಡೆಸಿರುವ ಸಮೀಕ್ಷೆಯಿಂದ ತಿಳಿದು ಬಂದಿದೆ. ಪ್ರಮುಖ ಆದಾಯದ ಮೂಲವಾಗಿರುವ ಮದ್ಯ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲು ಸರಕಾರ ಹಿಂದೇಟು ಹಾಕುತ್ತಿದೆ. ಆದರೆ ಮದ್ಯಪಾನಿಯ ಆರೋಗ್ಯ ರಕ್ಷಣೆ ಮತ್ತು ಅವರ ಕುಟುಂಬದ ನಿರ್ವಹಣೆಗೆ ವಿವಿಧ ಯೋಜನೆಗಳ ಮೂಲಕ ಸುಮಾರು 40 ಸಾವಿರ ಕೋ.ರೂ. ವೆಚ್ಚ ಮಾಡಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.
Related Articles
ಮದ್ಯ ಮಾರಾಟ ಪುನರಾರಂಭ ಮಾಡಿರುವ ನಿರ್ಧಾರವನ್ನು ನಾಡಿನ ಪ್ರಮುಖ ಸ್ವಾಮೀಜಿಗಳು ವಿರೋಧಿಸಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಸಾಣೆಹಳ್ಳಿ ಮಠದ ಪೀಠಾಧ್ಯಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗಿನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ| ಸಿದ್ದರಾಮ ಸ್ವಾಮೀಜಿ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
Advertisement
-ಶಂಕರ ಪಾಗೋಜಿ