Advertisement
ಕಾಪು ಕ್ಷೇತ್ರ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಬಹಿಷ್ಕಾರದಿಂದ ಯಾರಿಗೂ ಯಾವುದೇ ಲಾಭವಿಲ್ಲ. ಅದರಿಂದ ನಷ್ಟವೇ ಜಾಸ್ತಿಯಾಗುತ್ತದೆ ಎಂದರು.
Related Articles
Advertisement
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 20 ಕೋಟಿ ರೂಪಾಯಿ ಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಚುನಾವಣಾ ಬಹುಷ್ಕಾರದ ಕೂಗು ಕೇಳಿ ಬಂದಿರುವಲ್ಲಿ ರಾಜಕೀಯ ಪ್ರಾತಿನಿಧ್ಯವನ್ನೂ ನೀಡಲಾಗಿದೆ. ದೇವಸ್ಥಾನದ ಅಭಿವೃದ್ಧಿಗೂ ಅನುದಾನ ನೀಡಲಾಗಿದೆ ಎಂದರು.
ಕಾಪು ವಿಧಾನ ಸಭಾ ಕ್ಷೇತ್ರದ 26 ಗ್ರಾಮ ಪಂಚಾಯತ್ ಗಳಲ್ಲೂ ಬಿಜೆಪಿ ಬೆಂಬಲಿತರು ಜಯ ಸಾಧಿಸುವ ನಿರೀಕ್ಷೆಯಿದೆ. ಅದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ನಡೆಯುತ್ತಿದೆ. ಕಾರ್ಯಕರ್ತರೂ ಕೂಡಾ ಶ್ರಮಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರಕಾರಗಳ ಜೊತೆಗೆ ಗ್ರಾಮ ಪಂಚಾಯತ್ ಗಳಲ್ಲೂ ಬಿಜೆಪಿ ಆಡಳಿತದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು.
ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಬಿಜೆಪಿ ಮಂಡಲ ಪ್ರಭಾರಿ ಯಶ್ ಪಾಲ್ ಸುವರ್ಣ, ಚುನಾವಣಾ ಉಸ್ತುವಾರಿ ನವೀನ್ ಎಸ್.ಕೆ., ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.