Advertisement

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

11:07 AM Dec 27, 2024 | Team Udayavani |

ನವದೆಹಲಿ: ಆರ್ಥಿಕ ಸುಧಾರಣೆಯ ಹರಿಕಾರ, ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಗುರುವಾರ(ಡಿ.26) ರಾತ್ರಿ ನಿಧನ ಹೊಂದಿದರು.

Advertisement

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮಾಜಿ ಪ್ರಧಾನಿ ಅವರ ನಿಧನಕ್ಕೆ ದೇಶದ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಗಲಿದ ಮಾಜಿ ಪ್ರಧಾನಿಗೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತು X ನಲ್ಲಿ ಟ್ವೀಟ್ ಮಾಡಿದ ರಾಹುಲ್ ‘ ನಾನು ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ, “ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದವರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಏರುವಂತೆ ಮಾಡಿದೆ. ನಾನು ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ. ಅವರನ್ನು ದೇಶದ ಕೋಟ್ಯಾಂತರ ಮಂದಿ ನೆನಪಿಸಿಕೊಳ್ಳುತ್ತಾರೆ. ಅವರ ಮಾರ್ಗದರ್ಶನಕ್ಕೆ ನಾನು ಸದಾ ಚಿರಋಣಿ ಎಂದು ಬರೆದುಕೊಂಡಿದ್ದಾರೆ.

Advertisement

ಅದೇ ರೀತಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್ ಮಾಡಿದ್ದು ‘ ಮಾಜಿ ಪ್ರಧಾನಿ ನಿಧನದಿಂದ ದೃಷ್ಠಿಯುಳ್ಳ ರಾಜನೀತಿ ತಜ್ಞನನ್ನು ಕಳೆದುಕೊಂಡಿದ್ದೇವೆ ಅವರ ದೇಶದ ಆರ್ಥಿಕತೆಗೆ ಅವರು ನೀಡಿದ ಕೊಡುಗೆ ಎಂದಿಗೂ ಮರೆಯಲಾಗದು, ಅವರ ಆರ್ಥಿಕ ಉದಾರೀಕರಣ ನೀತಿಗಳು ಮತ್ತು ಹಕ್ಕುಗಳ ಆಧಾರಿತ ಕಲ್ಯಾಣ ಮಾದರಿಯು ಕೋಟ್ಯಂತರ ಭಾರತೀಯರ ಜೀವನವನ್ನು ಗಾಢವಾಗಿ ಪರಿವರ್ತಿಸಿದೆ. ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿರುವ ಕೊಡುಗೆ ಭಾರತೀಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿದೆ.

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ:
ದಿವಂಗತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ, 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲು ಸಜ್ಜಾಗಿದೆ. ಇದಲ್ಲದೆ, ದಿನದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next