Advertisement

ಬಿಜೆಪಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ

07:37 PM Apr 04, 2021 | Girisha |

ಸಿಂದಗಿ: ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕೆ ಕಾರ್ಯಕರ್ತರು ಮುಖ್ಯ. ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

Advertisement

ಶನಿವಾರ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ಬಿಜೆಪಿ ಸಿಂದಗಿ ಮಂಡಳ ಹಮ್ಮಿಕೊಂಡ ಬೂತ್‌ ಸಂಪರ್ಕ ಅಭಿಯಾನದಲ್ಲಿ ಅವರು ಮಾತನಾಡಿದರು. ಸರಕಾರ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಮನೆ ಮನೆಗೂ ಕಾರ್ಯಕರ್ತರು ಹೋಗಬೇಕು. ಅವರ ಮನಕ್ಕೆ ಮುಟ್ಟುವಂತೆ ತಿಳಿಹೇಳಬೇಕು. ಬಿಜೆಪಿಗೆ ಮತ ಹಾಕಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೈ ಬಲಪಡಿಸಬೇಕು ಎಂದು ಹೇಳಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಸಿಂದಗಿ ಮಂಡಳದ ಅಧ್ಯಕ್ಷ ಈರಣ್ಣ ರಾವೂರ, ಮಂಡಳ ಪ್ರಧಾನ ಕಾರ್ಯದರ್ಶಿ ಗುರು ತಳವಾರ ಮಾತನಾಡಿ, ಬಿಜೆಪಿ ಮಾಜಿ ಶಾಸಕರಾದ ಅಶೋಕ ಶಾಬಾದಿ, ರಮೇಶ ಭೂಸನೂರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಏನಾದರು ಅಭಿವೃದ್ಧಿ ಕೆಲಸವಾಗಿದ್ದರೆ ಅದು ಬಿಜೆಪಿ ಸರಕಾರದ ಶಾಸಕರಿದ್ದಾಗ ಮಾತ್ರ. ರಮೇಶ ಭೂಸನೂರ ಅವರು ಎರಡು ಅವಧಿಯಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಮುದಾಯ ಭವನಗಳ ನಿರ್ಮಾಣ, 100 ಕೆವಿ ಸ್ಟೇಷನ್‌ಗಳ ಸ್ಥಾಪನೆ, ದಲಿತ ಕೃಷಿಕರ ಭೂಮಿಗಳಿಗೆ ನೀರಾವರಿ, ಮೀನುಗಾರರ ಕುಟುಂಬಕ್ಕೆ ಅಭಿವೃದ್ಧಿ ಕಾರ್ಯಗಳು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ರಮೇಶ ಭೂಸನೂರ ಅವರು ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಮನೆಯಲ್ಲಿ ಕುಳಿತುಕೊಳ್ಳದೇ ಪಕ್ಷದ ಸಂಘಟನೆ ಕಾರ್ಯ ಮಾಡಿದ್ದಾರೆ. ಅವರ ಶ್ರಮದಿಂದ ಕ್ಷೇತ್ರದಲ್ಲಿ ಪಕ್ಷದ ಅಸ್ಥಿತ್ವ ಉಳಿದಿದೆ. ಸಿಂದಗಿ ಉಪ ಚುನಾವಣೆಯಲ್ಲಿ ಪಕ್ಷದಿಂದ ಯಾರಿಗೆ ಟಿಕೆಟ್‌ ನೀಡಲಿ, ಅವರ ಗೆಲುವಿಗೆ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸೋಣ ಎಂದು ಹೇಳಿದರು. ಗ್ರಾಮಸ್ಥರಾದ ಮೌಲಾಲಿ ತಳವಾರ, ಶಿವಾನಂದ ಹಿರೇಮಠ, ಮಲಕಪ್ಪ ಸಿಂಗೆ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಾದ ಅಮರೇಶ ಸಾಲಕ್ಕಿ, ಅಮರೇಶ ದೇಸಾಯಿ, ಸಿದ್ದಲಿಂಗಯ್ಯ ಹಿರೇಮಠ, ಸುದರ್ಶನ ಜಿಂಗಾಣಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಸಿಂದಗಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವಿದ್ದ ಸಂದರ್ಭದಲ್ಲಿ ಪ್ರತಿ ಗ್ರಾಮಗಳಿಗೂ ಅಭಿವೃದ್ಧಿ ಕೆಲಸ ನಡೆದಿದ್ದು, ಪಕ್ಷ ನೀಡಿರುವ ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮವನ್ನು ಕಾರ್ಯಕರ್ತರು ಮತದಾರರ ಮನೆ ಮನೆಗೆ ತಲುಪಿಸಬೇಕು ಎಂದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ಎಂ.ಆರ್‌. ತಾಂಬೋಳಿ ಹೇಳಿದರು.

Advertisement

ಶನಿವಾರ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಪಕ್ಷದ ಸಾಧನೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ನಮ್ಮ ಮುಖ್ಯ ಗುರಿ ಪಕ್ಷ ವನ್ನು ಸಿಂದಗಿ ಕ್ಷೇತ್ರದಲ್ಲಿ ಮತ್ತೆ ಅಧಿಕಾರಕ್ಕೆ ತರುವುದಾಗಿದೆ. ಕಾರ್ಯಕರ್ತರು ನಿಷ್ಠೆ, ಪ್ರಾಮಾಣಿಕತೆ, ಶ್ರದ್ಧೆಯಿಂದ ಕೆಲಸ ಮಾಡಬೇಕು. ಬೂತ್‌ ಮಟ್ಟದ ಸಮಿತಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ಬೂತ್‌ ಮಟ್ಟದಲ್ಲಿ ಪಕ್ಷ ಸದೃಢವಾದರೆ ಬೇರೆ ಪಕ್ಷಗಳು ನಮ್ಮನ್ನು ಮಣಿಸಲು ಸಾಧ್ಯವಿಲ್ಲ. ಕಾರ್ಯಕರ್ತರು ಜನತೆಯ ಮನೆ ಮನೆಗೆ ಹೋಗಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅನುಷ್ಠಾನಕ್ಕೆ ತಂದ ಜನಪರ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ| ದಸ್ತಗೀರ ಮುಲ್ಲಾ ಮಾತನಾಡಿದರು. ತಾಲೂಕು ಅಧ್ಯಕ್ಷ ರಮೇಶ ಐಹೋಳಿ, ಇಬ್ರಾಹಿಮಸಾಬ ಗೋಗಿ, ಬಂದೇನವಾಜ ಗೋಗಿ, ಮಹಮ್ಮದ್‌ ಅಸಫಾಕ್‌ ಕರ್ಜಗಿ, ಅಲ್ಲಿಸಾಬ ಹುಂಡಿಕಾರ್‌ ಹಾಗೂ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next