Advertisement
ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನ ಮಂಡಳಿ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನ ಮಂಡಳಿಯ ಪ್ರಾಯೋಜಕತ್ವದಲ್ಲಿ ಕ್ವಾಂಟಮ್ ಕ್ಷೇತ್ರ ಸಿದ್ಧಾಂತ ಮತ್ತು ಅನ್ವಯಗಳು ಕುರಿತು ಆಯೋಜಿಸಿದ ರಾಷ್ಟ್ರೀಯ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಕೆ.ಬಿ. ವಿಜಯ ಕುಮಾರ್ ಮಾತನಾಡಿ, ಸ್ನಾತಕೋತ್ತರ ಕೇಂದ್ರಗಳಲ್ಲಿ ಇಂತಹ ಕಾರ್ಯಾಗಾರಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳು ಬಹಳಷ್ಟು ಹೊಸ ಹೊಸ ವಿಷಯಗಳನ್ನು ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.
Related Articles
ಗೌರವ ಅತಿಥಿಯಾಗಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೊ ನೊರೊನ್ಹ ಮಾತನಾಡಿ, ಅಧ್ಯಯನ ಮತ್ತು ಸಂಶೋ ಧನೆಗಳ ಮೂಲಕ ಗಳಿಸುವ ಜ್ಞಾನವನ್ನು ಸಮಾಜದ ಒಳಿತಿಗೆ ಅಳವಡಿಸಬೇಕು. ವಿವಿಯಲ್ಲಿ ವಿವಿಧ ಕ್ಷೇತ್ರಗಳ ಕುರಿತು ಜ್ಞಾನ ಸಂಪಾದನೆ ಮಾಡುವುದು ಮುಖ್ಯವಾಗಿರದೆ, ಅದನ್ನು ಧನಾತ್ಮಕ ವಾಗಿ ಬಳಸುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.
Advertisement
ದೃಢ ಸಂಕಲ್ಪ ಬೇಕುಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಹಾಗೂ ಕ್ಯಾಂಪಸ್ ನಿರ್ದೇಶಕರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿಜ್ಞಾನ ಕ್ಷೇತ್ರದಲ್ಲಿ ಪ್ರಖ್ಯಾತಿಯನ್ನು ಗಳಿಸಲು ಸತತ ಅಧ್ಯಯನ ಮತ್ತು ಪರಿಶ್ರಮ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಹೇಳಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಡಾ| ಇ. ದೀಪಕ್ ಡಿ’ಸಿಲ್ವ ಸ್ವಾಗತಿಸಿ, ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎ.ಪಿ. ರಾಧಾಕೃಷ್ಣ ವಂದಿಸಿದರು. ವಿದ್ಯಾರ್ಥಿನಿ ಜೋಯ್ಲಿನ್ ಎಂ. ರೋಡ್ರಿಗಸ್ ಕಾರ್ಯಕ್ರಮ ನಿರ್ವಹಿಸಿದರು.