Advertisement

ಗ್ರಾಮಗಳಿಗೂ ಕಮಲ: ಮೂರೂ ಪಕ್ಷಗಳಿಗೆ ಸಂತೃಪ್ತಿ ತಂದ ಫ‌ಲಿತಾಂಶ

06:29 AM Jan 01, 2021 | Team Udayavani |

ಬೆಂಗಳೂರು: ಗ್ರಾ.ಪಂ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಗ್ರಾಮೀಣ ಭಾಗದಲ್ಲೂ ಬಿಜೆಪಿ ತನ್ನ ಬೇರುಗಳನ್ನು ಗಟ್ಟಿಗೊಳಿಸಿಕೊಂಡಿದೆ. ಕಾಂಗ್ರೆಸ್‌ ನೆಲೆಗಳು ಅಲುಗಾಡಿದರೂ ಫ‌ಲಿತಾಂಶದ ಬಗ್ಗೆ ಪಕ್ಷದ ನಾಯಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ಕೂಡ ಫ‌ಲಿತಾಂಶ ಕಂಡು ತೃಪ್ತಿಪಟ್ಟಿದೆ.

Advertisement

ಬಿಜೆಪಿ ಈ ಬಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮೀಣ ಮತದಾರರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಮೊದಲ ಬಾರಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗಳನ್ನು ಹಿಂದಿಕ್ಕಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಿಎಸ್‌ವೈ ಮಾತನಾಡಿ, ಬಿಜೆಪಿ ಬೆಂಬಲಿತರು ಶೇ. 60ಕ್ಕೂ ಹೆಚ್ಚು ಸ್ಥಾನ ಗಳಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ನವರೇ ಹೆಚ್ಚು
ಬಿಜೆಪಿ ಹೇಳಿಕೊಳ್ಳುವಷ್ಟು ಸ್ಥಾನ ಗೆದ್ದಿಲ್ಲ. ಕಾಂಗ್ರೆಸ್‌ ಬೆಂಬಲಿತರೇ ಹೆಚ್ಚು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಮತ್ತು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಳಮಟ್ಟದಲ್ಲೂ ಪಕ್ಷ ಸ್ಥಿರ
ಪ್ರತಿಕೂಲ ಪರಿಸ್ಥಿತಿ ನಡುವೆಯೂ ಕಾರ್ಯಕರ್ತರು ಹೋರಾಟ ಮಾಡಿದ್ದರಿಂದ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ತಳಮಟ್ಟದಲ್ಲಿಯೂ ಪಕ್ಷ ಸ್ಥಿರವಾಗಿದೆ ಎಂದು ಜೆಡಿಎಸ್‌ ನಾಯಕರಾದ ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ, ಸಮರ್ಥಿಸಿಕೊಂಡಿದ್ದಾರೆ.

ಕರಾವಳಿಯಲ್ಲೂ ಮುನ್ನಡೆ
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾ.ಪಂ.ಗಳ ಪೈಕಿ 146ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 47 ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್‌ ಬೆಂಬಲಿತರು ಜಯ ಸಾಧಿಸಿದ್ದಾರೆ. 22 ಗ್ರಾ.ಪಂ.ಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಹೆಚ್ಚು ಸ್ಥಾನಗಳು, ಬಂಟ್ವಾಳದಲ್ಲಿ ಕಾಂಗ್ರೆಸ್‌ ಬೆಂಬಲಿತರಿಂದ ಉತ್ತಮ ಸಾಧನೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರು 110 ಗ್ರಾ.ಪಂ.ಗಳಲ್ಲಿ , ಕಾಂಗ್ರೆಸ್‌ ಬೆಂಬಲಿತರು 35 ಗ್ರಾ.ಪಂ.ಗಳಲ್ಲಿ ಬಹುಮತ ಪಡೆದಿದ್ದಾರೆ. 7 ಪಂಚಾಯತ್‌ಗಳಲ್ಲಿ ಇತರರು ಮೇಲುಗೈ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next