ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆಯನ್ನು ಜಾರಿಗೊಳಿಸುವುದು ನಿಶ್ಚಿತ, ಯಾವುದೇ ಕಾರಣಕ್ಕೂ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಇದೊಂದು ವಿಸ್ತಾರವಾದ ವಿಷಯವಾಗಿದ್ದು ಸದ್ಯ ವಿಚಾರ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಸಮಗ್ರ ಅಧ್ಯಯನದ ಬಳಿಕ ಸಮಾಜದ ಮುಖಂಡರ ಜತೆಯೂ ಮಾತುಕತೆ ನಡೆಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೊಳಿಸಲಿದ್ದೇವೆ ಎಂದರು.
ನಂತರ ಮಾತನಾಡಿದ ಸಚಿವರು ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಶಿಕ್ಷಣ ಇಲಾಖೆ ಪಠ್ಯಕ್ರಮವನ್ನೂ ಬೋಧಿಸಲು ಉದ್ದೇಶಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಭೀತಿ ಜತೆ ಹಕ್ಕಿ ಜ್ವರ: ಜಿಲ್ಲೆಯಲ್ಲಿ ಕಟ್ಟೆಚ್ಚರ
ಮದರಸಾ ಶಿಕ್ಷಣವನ್ನು ಎಸ್‌ಎಸ್‌ಎಲ್‌ಸಿ ಗೆ ತತ್ಸಮಾನ ಎಂದು ಪರಿಗಣಿಸಿ, ಮದರಸಾ ಶಿಕ್ಷಣ ಪಡೆದು ಹೊರ ಬರುವ ವಿದ್ಯಾರ್ಥಿಗಳಿಗೆ ಐಟಿಐ ನಂತಹ ಸ್ಕಿಲ್ ಓರಿಯೆಂಟೆಡ್ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.