Advertisement

ಲವ್ ಜಿಹಾದ್; ಕೇರಳ ಯುವತಿಯ ಮತಾಂತರ, ಮದುವೆ NIA ತನಿಖೆಗೆ

01:56 PM Aug 16, 2017 | Team Udayavani |

ನವದೆಹಲಿ: ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನ ಜತೆ ವಿವಾಹವಾದ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.

Advertisement

ಕೇರಳದ ಹಿಂದೂ ಯುವತಿಯನ್ನು ಮದುವೆಯಾದ ಮತ್ತು ಮತಾಂತರಗೊಳಿಸಿದ ಪ್ರಕರಣದ ಬಗ್ಗೆ ಎನ್ ಐಎ ತನಿಖೆ ನಡೆಸಲಿ ಎಂದು ಸುಪ್ರೀಂ ಪೀಠದ ಸಿಜೆಐ(ಮುಖ್ಯ ನ್ಯಾಯಮೂರ್ತಿ) ಜಗದೀಶ್ ಸಿಂಗ್ ಖೇಹರ್ ಮತ್ತು ಜಸ್ಟೀಸ್ ಡಿವೈ ಚಂದ್ರಾಚೂಡ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ.

ಹಿಂದು ಯುವತಿ ಅಖಿಲ ಎಂಬುದಾಗಿತ್ತು, ಆದರೆ ಆಕೆ ಇಸ್ಲಾಂಗೆ ಮತಾಂತರಗೊಂಡು ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡು ಮುಸ್ಲಿಂ ಯುವಕ ಶಫಿನ್ ಜಹಾನ್ ಎಂಬಾತನ ಜತೆ 2016ರಲ್ಲಿ ವಿವಾಹವಾಗಿದ್ದಳು. ಈ ಪ್ರಕರಣ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು.

ಕೇರಳದ ಮಲಪ್ಪುರಂ ಜಿಲ್ಲೆಯಿಂದ 24 ವರ್ಷದ ಹಾದಿಯಾಳನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು ಎಂಬುದಾಗಿ ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಇದೊಂದು ಲವ್ ಜಿಹಾದ್ ಎಂದು ಬಣ್ಣಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೇರಳ ಪೊಲೀಸರಿಗೆ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next