Advertisement
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ವರನ್ನು ಮದುವೆಯಾಗುತ್ತಾರೆ. ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದರು.
Related Articles
Advertisement
ಇದನ್ನೂ ಓದಿ:ಹುಣಸೂರು: ಚಿಲ್ಕುಂದ; ವೇತನಕ್ಕಾಗಿ ಆಗ್ರಹಿಸಿ ಗ್ರಾ.ಪಂ.ಸಿಬ್ಬಂದಿಗಳ ಪ್ರತಿಭಟನೆ
ವಿವಾದವಿಲ್ಲದಂತಹ ವ್ಯಕ್ತಿಗಳನ್ನು ಸಮಿತಿಯಲ್ಲಿ ಜೋಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಎಲ್ಲರಿಗೂ ಪ್ರಿಯವಾದ ವಿಚಾರಗಳನ್ನು ಹೇಳಬೇಕು. ಎಲ್ಲರನ್ನೂ ಖುಷಿಪಡಿಸುವುದು ಕಷ್ಟ, ಎಲ್ಲರೂ ಸಮಾನ ಎನ್ನುವ ರೀತಿಯಲ್ಲಿ ಪರಿಷ್ಕರಣೆಯಾಗಬೇಕು. ಮಕ್ಕಳ ಮನಸ್ಸನ್ನು ಪುಳಕಗೊಳಿಸುವ, ವಿಕಸಿತಗೊಳಿಸುವ ಪಠ್ಯಗಳು ಬರಬೇಕು ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಹಿಜಾಬ್ ಆದೇಶ ಪಾಲಿಸಿ: ಮಂಗಳೂರಿನಲ್ಲಿ ಹಿಜಾಬ್ ಗಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಹೋರಾಟದ ವಿಚಾರವಾಗಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಸ್ಪಷ್ಟವಾಗಿದೆ. ತರಗತಿಯ ಒಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಕೋರ್ಟ್ ಹೇಳಿದೆ. ಈ ನೆಲದಲ್ಲಿ ಬದುಕುವಂಥ ಕಾನೂನಿಗೆ ಗೌರವ ಕೊಡುವಂತ ಎಲ್ಲರೂ ಈ ಆದೇಶ ಪಾಲಿಸಬೇಕು. ಹೈಕೋರ್ಟ್ ಕಾನೂನು ಉಲ್ಲಂಘನೆ ಮಾಡುತ್ತೇವೆನ್ನುವುದು ಸರಿಯಲ್ಲ. ಅಂಥವರ ಮೇಲೆ ಕಠಿಣವಾದ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದೆ ಇದು ದೇಶದ್ರೋಹಿ ಚಟುವಟಿಕೆಗೆ ಕಾರಣವಾಗುತ್ತದೆ ಎಂದರು.
ಎಲ್ಲವನ್ನೂ ಸರ್ಕಾರ ಗಮನಿಸುತ್ತಿದೆ: ಮಳಲಿ ಮಸೀದಿ ವಿಚಾರ, ಎಸ್ ಡಿಪಿಐ ಎಚ್ಚರಿಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಈ ವಿಚಾರವನ್ನು ಗಮನಿಸುತ್ತಿದೆ. ಇತಿಹಾಸಗಳಲ್ಲಿ ಆಗಿರುವ ತಪ್ಪುಗಳನ್ನು ಸರಿ ಮಾಡಬೇಕು. ಈ ಬಗ್ಗೆ ಎಲ್ಲರೂ ಆಲೋಚಿಸಿದರೆ ಒಟ್ಟಾಗಿ ಬದುಕಬಹುದು ಎಂದರು.
ಹಲವಾರು ದೇವಸ್ಥಾನಗಳನ್ನು ಕೆಡವಿ ಮಸೀದಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ನಾವ್ಯಾರೂ ಇದಕ್ಕೆ ಸಾಕ್ಷಿಗಳಲ್ಲ. ನಮ್ಮ ಹಿರಿಯರ ಕಾಲದಲ್ಲಿ ಕೆಲವೊಂದು ತಪ್ಪುಗಳಾಗಿವೆ. ಇತಿಹಾಸಜ್ಞರು ಉತ್ಖನನ ಮಾಡಿ ಯಾವುದು ಸರಿ ಯಾವುದು ತಪ್ಪು ಎನ್ನುವ ಬಗ್ಗೆ ತಿಳಿಸಬೇಕು. ಎಲ್ಲರೂ ಈ ಬಗ್ಗೆ ಒಟ್ಟಾಗಿ ಯೋಚನೆ ಮಾಡಿದರೆ ಖಂಡಿತ ಈ ಸಮಸ್ಯೆ ಬಗೆಹರಿಸಬಹುದು ಎಂದು ಶೋಭಾ ಕರಂದ್ಲಾಜೆ ಹೇಳಿದರು.