Advertisement
ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ವ್ಯಾನ್ ಚಾಲಕನನ್ನು ಪ್ರೇಮ ವಿವಾಹವಾದ ಪ್ರಕರಣದಲ್ಲಿ ಮಗಳನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಕೋರಿ ವಿದ್ಯಾರ್ಥಿನಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಬುದ್ಧಿವಾದದ ಮಾತುಗಳನ್ನು ಹೇಳಿತು.
Related Articles
Advertisement
ಇವತ್ತು ನೀಡಿದ್ದು, ಮುಂದೆ ಪಡೆದುಕೊಳ್ಳುತ್ತಾರೆಮಕ್ಕಳು ಇಂದು ಹೆತ್ತವರಿಗೆ ಏನು ನೀಡುತ್ತಾರೆ, ಅದನ್ನೇ ಮುಂದೆ ಅವರ ಮಕ್ಕಳಿಂದ ಪಡೆದುಕೊಳ್ಳುತ್ತಾರೆ. ಹೆತ್ತವರಿಗಿಂತ ದೊಡ್ಡ ಧರ್ಮವಿಲ್ಲ. ಸಹಾನುಭೂತಿಗಿಂತ ದೊಡ್ಡ ಧರ್ಮವಿಲ್ಲ. ಕೋಪಕ್ಕಿಂತ ಶತ್ರು ಇಲ್ಲ. ಖ್ಯಾತಿ-ಗೌರವಕ್ಕಿಂತ ದೊಡ್ಡ ಆಸ್ತಿ ಇಲ್ಲ. ಕುಖ್ಯಾತಿಯೇ ಮರಣ. ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿದ ತಂದೆ-ತಾಯಿಯ ಋಣವನ್ನು ನೂರು ವರ್ಷವಾದರೂ ತೀರಿಸಲು ಅಸಾಧ್ಯ ಎಂಬುದಾಗಿ ಮನುಸ್ಮತಿ ಹೇಳುತ್ತದೆ. ಆದ್ದರಿಂದ ತಂದೆ-ತಾಯಿ, ಗುರು-ಹಿರಿಯರಿಗೆ ಇಷ್ಟವಾದ ಕೆಲಸಗಳನ್ನೇ ಮಕ್ಕಳು ಮಾಡಬೇಕು. ಪ್ರೀತಿ ಹೃದಯದಿಂದ ಹೃದಯಕ್ಕಿರಬೇಕು ಹೊರತು ಬಾಹ್ಯ ಆಕರ್ಷಣೆಗೆ ಸೀಮಿತವಾಗಬಾರದು ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ ವಿದ್ಯಾರ್ಥಿನಿ, ವ್ಯಾನ್ ಚಾಲಕ ಹೇಳಿದ್ದೇನು?
ವಿಚಾರಣೆ ವೇಳೆ ವಿದ್ಯಾರ್ಥಿನಿ, “ತಾನು ವಯಸ್ಕಳಾಗಿದ್ದು, ಪ್ರೀತಿಸಿ ಮದುವೆಯಾಗಿದ್ದೇನೆ. ಪತಿಯೊಂದಿಗೆ ಜೀವಿಸಲು ಬಯಸಿದ್ದೇನೆ’ ಎಂದು ಹೇಳಿಕೆ ದಾಖಲಿಸಿದಳು. ಪತಿ ಸಹ “ತನ್ನ ಪತ್ನಿಯನ್ನು ಎಂಜಿನಿಯರ್ ಪದವಿ ಓದಿಸುತ್ತೇನೆ. ತನ್ನ ಜೀವನ ಇರುವವರೆಗೂ ಆಕೆ ಕಣ್ಣೀರು ಹಾಕದಂತೆ ನೋಡಿಕೊಳ್ಳುತ್ತೇನೆ’ ಎಂದು ಕೋರ್ಟ್‌ಗೆ ಭರವಸೆ ನೀಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದಲ್ಲಿ ಅಕ್ರಮ ಬಂಧನ ಇಲ್ಲವಾಗಿದ್ದು ಎಂದು
ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.