Advertisement

ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ!

12:47 PM Apr 25, 2021 | Team Udayavani |

ಹಾವೇರಿ: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡಿರುವವರನ್ನು ವಿದ್ಯಾಶ್ರೀ ಗಾಳಿ (22 ವರ್ಷ) ಮತ್ತು ಇರ್ಷಾದ್ ಕುಡಚಿ (23 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಮಂಗಳೂರು ಸಬ್  ಜೈಲು: ಖೈದಿಯೊಬ್ಬನಿಂದ ಸಹ ಖೈದಿಗಳಿಬ್ಬರ ಮೇಲೆ ಹಲ್ಲೆ

ಕೆಲವು ದಿನಗಳ ಹಿಂದೆ ಬೇರೊಬ್ಬ ಯುವಕನ ಜೊತೆ ವಿದ್ಯಾಶ್ರೀ ಅವರ ನಿಶ್ಚಿತಾರ್ಥ ನೆರವೇರಿತ್ತು. ಆದರೆ ನಿನ್ನೆ ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಂದು ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಇದನ್ನೂ ಓದಿ: ವೀಕೆಂಡ್‌ಗೆ ಲಾಕ್‌ ಆಯ್ತು ಬಾಗಲಕೋಟೆ ಜಿಲ್ಲೆ!

Advertisement

Udayavani is now on Telegram. Click here to join our channel and stay updated with the latest news.

Next