Advertisement

ಆಶಾ ಕಾರ್ಯಕರ್ತೆಯರಿಗೆ ಕಡಿಮೆ ಬಡ್ಡಿ ಸಾಲ

01:00 PM Jun 21, 2020 | Suhan S |

ಹುಬ್ಬಳ್ಳಿ: ರಾಜ್ಯದಲ್ಲಿ ಆಶಾ ಕಾರ್ಯಕರ್ತರ ಸಹಕಾರ ಸಂಘಗಳನ್ನು ರಚಿಸಿ ಡಿಸಿಸಿ ಬ್ಯಾಂಕ್‌ಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಧನಸಹಾಯ ಮಾಡಲು ಸಹಕಾರ ಇಲಾಖೆಯಿಂದ ಕ್ರಮ ಕೈಗೊಳ್ಳಲಾವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಹೇಳಿದರು.

Advertisement

ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಭಾಂಗಣದಲ್ಲಿ ಕೆಸಿಸಿ ಬ್ಯಾಂಕ್‌, ಧಾರವಾಡ ಸಹಕಾರ ಹಾಲು ಒಕ್ಕೂಟ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಶ್ರಯದಲ್ಲಿ ಕೋವಿಡ್‌-19 ವಾರಿಯರ್ಸ್‌ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಕೋವಿಡ್‌-19 ಪರಿಹಾರ ನಿಧಿಗೆ ರಾಜ್ಯದ ಸಹಕಾರಿ ಬ್ಯಾಂಕುಗಳಿಂದ 52 ಕೋಟಿ ರೂ. ದೇಣಿಗೆ ನೀಡಲಾಗಿದೆ. ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಕೋವಿಡ್ ವಾರಿಯರ್ಸ್‌ಗಳಾಗಿ ಕೆಲಸ ನಿರ್ವಹಿಸಿದ್ದು, ಅವರೆಲ್ಲರಿಗೂ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಕುರಿತು ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಂಡಿದ್ದು, ವಿತರಿಸಲಾಗುತ್ತಿದೆ ಎಂದರು.

ಲಾಭದಲ್ಲಿರುವ ಸಹಕಾರಿ ಸಂಘಗಳಿಂದ ಹಣ ಸಂಗ್ರಹಿಸಿ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಹಂತ ಹಂತವಾಗಿ ಜಿಲ್ಲಾಮಟ್ಟದ ಸಹಕಾರಿ ಸಂಘಗಳಿಂದ ಹಣ ಸಂಗ್ರಹಿಸಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ರಾಜ್ಯದಲ್ಲಿ ಈಗ ಇರುವ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಈ ಮಾದರಿಯಲ್ಲಿ ಆಶಾ ಕಾರ್ಯಕರ್ತೆರ ಸಹಕಾರಿ ಸಂಘಗಳನ್ನು ಸ್ಥಾಪಿಸಿ ಧನ ಸಹಾಯ ಮಾಡಲಾಗುವುದೆಂದರು. ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲಾಭದಲ್ಲಿರುವ ವಿವಿಧ ಸಹಕಾರ ಸಂಘದಿಂದ ಈಗಾಗಲೇ ಜೂ.20ರ ವರೆಗೆ 178 ಆಶಾ ಕಾರ್ಯಕರ್ತೆಯರಿಗೆ 5.34 ಲಕ್ಷ ರೂ. ಪ್ರೋತ್ಸಾಹಧನವನ್ನು ಸಂಬಂಧಿಸಿದ ಸಹಕಾರ ಸಂಘಗಳಿಂದ ನೀಡಲಾಗಿದೆ. ಇಂದು 100 ಜನ ಆಶಾ ಕಾರ್ಯಕರ್ತೆಯರಿಗೆ ಒಟ್ಟು 3 ಲಕ್ಷ ರೂ. ಪ್ರೋತ್ಸಾಹಧನ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ನವಲಗುಂದ, ಕುಂದಗೋಳ ಸೇರಿದಂತೆ ವಿವಿಧೆಡೆಯ ರೈತರು ಮನವಿ ಸಲ್ಲಿಸಿದರು. ಸಚಿವ ಜಗದೀಶ ಶೆಟ್ಟರ, ವಿಪ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರೊ| ಎಸ್‌.ವಿ.ಸಂಕನೂರ, ಪ್ರದೀಪ ಶೆಟ್ಟರ, ಶಾಸಕ ಪ್ರಸಾದ ಅಬ್ಬಯ್ಯ, ಕೆಸಿಸಿ ಬ್ಯಾಂಕ್‌ ಅಧ್ಯಕ್ಷ ಬಾಪೂಗೌಡ, ಜಿಲ್ಲಾ ಧಿಕಾರಿ ದೀಪಾ ಚೋಳನ್‌, ಸಹಕಾರಿ ಸಂಘಗಳ ಸಂಯುಕ್ತ ನಿಬಂಧಕ ಜಿ.ಎಂ.ಪಾಟೀಲ, ಕೆಸಿಸಿ ಬ್ಯಾಂಕ್‌ ಹಾಗೂ ಸಹಕಾರ ಹಾಲೂ ಒಕ್ಕೂಟದ

Advertisement

ನಿರ್ದೇಶಕರು, ಜಿಲ್ಲಾ ಆರೋಗ್ಯಧಿಕಾರಿ ಯಶವಂತ ಮದೀನಕರ್‌, ಸಹಕಾರಿ ಸಂಘಗಳ ಉಪನಿಬಂಧಕ ಗಂಗಾಧರ ಗಚ್ಚಿ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next