Advertisement

ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 89 ಕೋವಿಡ್ ಪ್ರಕರಣ ಪತ್ತೆ, 11 ಮಂದಿ ಸಾವು

04:38 PM Jun 21, 2021 | Team Udayavani |

ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 89 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇದು ಈ ವರ್ಷ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ತಿಳಿಸಿದೆ.

Advertisement

ಇದನ್ನೂ ಓದಿ:ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಸಚಿವೆ ಶಶಿಕಲಾ ಜೊಲ್ಲೆ

ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಕೂಡಾ ಶೇ.0.16ಕ್ಕೆ ಇಳಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 1,996ಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.98.12ರಷ್ಟಿದ್ದು, ಕಳೆದ 24 ಗಂಟೆಯಲ್ಲಿ 173 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಕೋವಿಡ್ ನಿಂದ 24,925 ಮಂದಿ ಸಾವನ್ನಪ್ಪಿದ್ದಾರೆ.

ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣ ಗಮನಾರ್ಹವಾಗಿ ಇಳಿಕೆಯಾಗುತ್ತಿದ್ದು, ಕಳೆದ 88 ದಿನಗಳ ನಂತರ ಇದೇ ಮೊದಲ ಬಾರಿಗೆ 53,256 ಕೋವಿಡ್ 19 ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಜೂನ್ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next