ಹೊಸದಿಲ್ಲಿ: ಅಂತಾರಾಷ್ಟ್ರೀಯ ಇಂಧನ ಬೆಲೆಯಲ್ಲಿನ ಏರಿಕೆಗೆ ಅನುಗುಣವಾಗಿ ಎಲ್‌ಪಿಜಿ ಬೆಲೆಯನ್ನು ಭಾನುವಾರ ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ.
ಇಂದಿನಿಂದ 14.2 ಕೆಜಿ ಸಬ್ಸಿಡಿ ರಹಿತ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಪ್ರತಿ ಸಿಲಿಂಡರ್ ಬೆಲೆ 999.50 ರೂ. ಆಗಿರಲಿದೆ.
ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಏರಿಕೆಯಾಗುತ್ತಿದ್ದು, ಅದೇ ಸಮಯದಲ್ಲಿ ಗೃಹೋಪಯೋಗಿ ಅನಿಲ ಸಿಲಿಂಡರ್ ಬೆಲೆಯಲ್ಲಿಯೂ ಏರಿಕೆಯಾಗಿದೆ.
ಇದನ್ನೂ ಓದಿ:ಇನ್ನು ಮೂರೇ ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ: ಯಡಿಯೂರಪ್ಪ ಸುಳಿವು
ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 2253 ರೂ ನಿಂದ 2355.50 ರೂ. ಗೆ ಹೆಚ್ಚಿಸಲಾಯಿತು (102.50 ರೂ. ಹೆಚ್ಚಳ) ಅಲ್ಲದೆ, 5 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 655 ರೂ.ಗೆ ಹೆಚ್ಚಿಸಲಾಗಿದೆ.