ನವದೆಹಲಿ:ದೇಶದಲ್ಲಿ ಗ್ರಾಹಕರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದೀಗ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಣ್ಣ ಲವ್‌ಸ್ಟೋರಿ ಮಾಡ್ತಾರೆ,ನಮ್ಗೆ ಲವ್ ಸ್ಟೋರಿ ಬರೆಯೋದನ್ನೇ ನಿಲ್ಲಿಸಿಬಿಟ್ಟಿದ್ದಾರೆ!
ಎಲ್ ಪಿಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ. ಕಳೆದ ಬಾರಿ ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಇದರ ಪರಿಣಾಮ 14.2 ಕೆಜಿ ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 859.05 ರೂಪಾಯಿಗೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ಅಡುಗೆ ಅನಿಲದ ಸಿಲಿಂಡರ್ ಬೆಲೆ 837.50 ರೂಪಾಯಿ ಆಗಿದ್ದು, ಇದೀಗ 25.50 ರೂ. ಬೆಲೆ ಹೆಚ್ಚಳದ ನಂತರ 863 ರೂಪಾಯಿಗೆ ಏರಿಕೆಯಾದಂತಾಗಿದೆ. ಕೋಲ್ಕತಾದಲ್ಲಿ ಪ್ರತಿ ಸಿಲಿಂಡರ್ ಬೆಲೆ 886 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 875.05 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಏತನ್ಮಧ್ಯೆ ತೈಲ ಮಾರುಕಟ್ಟೆ ಕಂಪನಿಗಳು ಕೊನೆಗೂ ಡೀಸೆಲ್ ಪ್ರತಿ ಲೀಟರ್ ಬೆಲೆಯಲ್ಲಿ 20 ಪೈಸೆಯಷ್ಟು ಇಳಿಕೆ ಮಾಡಿದೆ. ಆದರೆ ಸತತ 32ನೇ ದಿನಗಳ ಬಳಿಕವೂ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದೆ.