ನವದೆಹಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 83.50 ರೂಪಾಯಿಯಷ್ಟು ಇಳಿಕೆಯಾಗಿದ್ದು, ಹೊಸ ದರ ಇಂದಿನಿಂದಲೇ ಜಾರಿಯಾಗಲಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಗುರುವಾರ (ಜೂನ್ 01) ತಿಳಿಸಿದೆ.
ಇದನ್ನೂ ಓದಿ:Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ
ದೆಹಲಿಯಲ್ಲಿ 19 ಕೆಜೆ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂಪಾಯಿಗೆ ಇಳಿಕೆಯಾಗಿದ್ದು, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.
ಕೋಲ್ಕತಾದಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 1,875.50 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ ಮುಂಬೈನಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,725 ರೂಪಾಯಿಯಾಗಿದೆ.
ಮೇ ತಿಂಗಳಿನಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 171.50 ರೂಪಾಯಿ ಇಳಿಕೆಯಾಗಿತ್ತು. ಮಾರ್ಚ್ ನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 350.50 ರೂಪಾಯಿ ಹೆಚ್ಚಳವಾಗಿತ್ತು.