Advertisement
ಕಳೆದ ಬಾರಿ ಅಕ್ಟೋಬರ್ 6 ರಂದು ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಸರ್ಕಾರಿ ತೈಲ ಕಂಪನಿಗಳು ಮಂಗಳವಾರ ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 50 ರೂಪಾಯಿ ಏರಿಕೆಯಾಗಿದೆ.
Related Articles
Advertisement
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಮಾತ್ರವಲ್ಲದೆ 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್ 349 ರೂ.ಗೆ ಮತ್ತು 10 ಕೆಜಿ 669 ರೂ.ಗೆ ಏರಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 2,003.50 ರೂ.ಗೆ ತಲುಪಿದೆ.
ಇದಲ್ಲದೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಮಂಗಳವಾರ, ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.21 ಇದ್ದರೆ ಡೀಸೆಲ್ ದರವು ಲೀಟರ್‌ಗೆ 87.47 ರೂ. ಆಗಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ 110.82 ರೂ, ಚೆನ್ನೈನಲ್ಲಿ 102.16 ರೂ ಇದೆ.
ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬೆಲೆಗಳಿಂದ ಜನತೆಗೆ ಪರಿಹಾರ ನೀಡಲು ಕೇಂದ್ರವು ನವೆಂಬರ್ 4 ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಸುಂಕವನ್ನು 5 ರೂ. ಮತ್ತು ಡೀಸೆಲ್‌ಗೆ 10 ರೂ. ರಷ್ಟು ಕಡಿತಗೊಳಿಸಿದ್ದು, ಇಂಧನ ಬೆಲೆಯಲ್ಲಿ ಗಣನೀಯ ಇಳಿಕೆಗೆ ಕಾರಣವಾಯಿತು.