Advertisement

LS Election; ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ: ಹೆಬ್ಬಾಳ್ಕರ್ ಸ್ಪಷ್ಟನೆ

06:17 PM Mar 20, 2024 | Team Udayavani |

ಬೆಳಗಾವಿ: ಮನೆಯ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಿದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು”ನಾನು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ, ಕೆಲಸದ ಒತ್ತಡ ಕಡಿಮೆ ಮಾಡಲು ಮನವಿ ಸಲ್ಲಿಸಲು ಬಂದಿದ್ದರು’ ಎಂದು ಹೇಳಿದ್ದಾರೆ.

Advertisement

ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ‘ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿಲ್ಲ‌.ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್‌ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್‌ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ’ ಎಂದರು.

‘ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು’ ಎಂದರು.

ಬುಧವಾರ ಬೆಳಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸುಮಾರು 500 ಮಂದಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿದ್ದರು.ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಚಿತ್ರೀಕರಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next