Advertisement

LS polls: ಚುನಾವಣಾ ಫಲಿತಾಂಶ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ; ಭಗವಂತ‌‌ ಖೂಬಾ

03:22 PM Apr 02, 2024 | Team Udayavani |

ಬೀದರ್: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿಎ ಮೈತ್ರಿ ಕೂಟ ಎಲ್ಲ 28 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು  ಕೇಂದ್ರ ಸಚಿವ, ಬಿಜೆಪಿ‌ ಅಭ್ಯರ್ಥಿ ಭಗವಂತ‌‌ ಖೂಬಾ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ತಿಂಗಳಿಂದ ಕಾಂಗ್ರೆಸ್ ಶಾಸಕರು ಅಸಮಾಧಾನ‌ಗೊಂಡಿದ್ದು, ಚುನಾವಣಾ ಫಲಿತಾಂಶ ಬಳಿಕ ಅಸಮಾಧಾನ ಸ್ಪೋಟಗೊಳ್ಳಲಿದೆ. ಇದರಿಂದ‌ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಎಲ್ಲ ಹಂತದ ಅನುದಾನ ಬಿಡುಗಡೆಯಾಗಿದ್ದು, ಕೇಂದ್ರ ವಿತ್ತ ಸಚಿವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next