ಲಕ್ನೋ: ಗುಜರಾತ್ ಟೈಟಾನ್ಸ್ ಕಾಳಗಕ್ಕೆ ಲಕ್ನೋ ಸಜ್ಜಾಗಿದೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಆರಂಭವಾದ ಎಲ್ ಎಸ್ ಜಿ ಮತ್ತು ಜಿಟಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯ ಸೋತಿರುವ ಗುಜರಾತ್ ಮತ್ತೆ ಗೆಲುವಿನ ಹಳಿಗೇರುವ ಪ್ರಯತ್ನದಲ್ಲಿದ್ದರೆ, ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧವೇ ಗೆದ್ದಿರುವ ಲಕ್ನೋ ಗೆಲುವಿನ ಲಯದಲ್ಲಿ ಮುಂದುವರಿಯುವ ಯೋಚನೆಯಲ್ಲಿದೆ.
ಅಫ್ಘಾನ್ ಆಟಗಾರ ನೂರ್ ಅಹಮದ್ ಗುಜರಾತ್ ಟೈಟಾನ್ಸ್ ಪರ ಐಪಿಎಲ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಅಲ್ಜಾರಿ ಜೋಸೆಫ್ ಅವರು ಸ್ಥಾನ ಪಡೆದಿಲ್ಲ.
ತಂಡಗಳು
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿ.ಕೀ), ಆಯುಶ್ ಬದೋನಿ, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಅವೇಶ್ ಖಾನ್, ರವಿ ಬಿಷ್ಣೋಯಿ.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿ.ಕೀ), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ