ಮುಂಬಯಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ರುವ ಆರೋಪದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಲೆ| ಕ| ಶ್ರೀಕಾಂತ್ ಪ್ರಸಾದ್ ಪುರೋ
ಹಿತ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಳೆದ 9 ವರ್ಷಗಳಿಂದ ಶ್ರೀಕಾಂತ್ ಪುರೋಹಿತ್ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಬುಧವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ನವಿ ಮುಂಬಯಿಯಲ್ಲಿರುವ ತಲೋಜಾ ಕೇಂದ್ರ ಕಾರಾಗೃಹದಿಂದ ಅವರು ಹೊರಬಂದರು.
ಈ ವೇಳೆ ಮಿಲಿಟರಿ ಪೊಲೀಸ್ ಹಾಗೂ ಸೇನೆಯ ತ್ವರಿತ ಪ್ರತಿಕ್ರಿಯಾ ತಂಡದ (ಕ್ವಿಕ್ ರೆಸ್ಪಾನ್ಸ್ ಟೀಮ್) ರಕ್ಷಣೆಯೊಂದಿಗೆ ಪುರೋ ಹಿತ್ ಅವರನ್ನು ಕಾರಿನಲ್ಲಿ ಜೈಲಿನಿಂದ ಹೊರಗೆ ಕರೆದೊಯ್ಯಲಾಯಿತು. ಈ ಹಿಂದೆ ಪುರೋಹಿತ್‌ರ ಜಾಮೀನು ಅರ್ಜಿಯನ್ನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಅಲ್ಲಗಳೆದ ಸುಪ್ರೀಂ ಕೋರ್ಟ್, ಶ್ರೀಕಾಂತ್ ಪುರೋಹಿತ್‌ಗೆ ಜಾಮೀನು ಮಂಜೂರು ಮಾಡಿತ್ತು. 2008ರ ಸೆಪ್ಟೆಂಬರ್ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು.