ನವದೆಹಲಿ: ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಲೈಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದಲ್ಲಿ ಆಪ್ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ದೆಹಲಿ ಸರ್ಕಾರಿ ಶಿಕ್ಷಕರನ್ನು ತರಬೇತಿಗಾಗಿ ಫಿನ್ಲಂಡ್‌ಗೆ ಕಳುಹಿಸುವ ಕಾರ್ಯಕ್ರಮಕ್ಕೆ ಸಕೇÕನಾ ಅವರು ಆಕ್ಷೇಪಣೆ ವ್ಯಕ್ತಪಡಿಸಿರುವುದನ್ನು ವಿರೋಧಿಸಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯವರೆಗೆ ಜಾಥಾ ನಡೆಸಲಾಗಿದೆ. ಸಿಎಂ, ಡಿಸಿಎಂ ಹಾಗೂ ಶಾಸಕರು ಪ್ರತಿಭಟಿಸುವ ಹಂತಕ್ಕೆ ಲೆಫ್ಟಿನೆಂಟ್ ಗವರ್ನರ್ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ.
ಆಡಳಿತಕ್ಕೆ ಸಂಬಂಧಿಸಿದಂತ ನಿರ್ಧಾರಗಳನ್ನು ಅವರು ಸ್ವತಂತ್ರರಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇನ್ನಾದರೂ ಈ ಬಗ್ಗೆ ಎಚ್ಚರವಹಿಸಲಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.