ಚೆನ್ನೈ: ಎಲ್‌ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಮೃತಪಟ್ಟಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಘೋಷಿಸಿದ ಹದಿನಾಲ್ಕು ವರ್ಷಗಳ ನಂತರ, ಕಾಂಗ್ರೆಸ್‌ನ ಮಾಜಿ ನಾಯಕ ಪಜಾ ನೆಡುಮಾರನ್ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ ಅದರಂತೆ ಪ್ರಭಾಕರನ್ ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದು ಶೀಘ್ರದಲ್ಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ ತಮಿಳುನಾಡಿನ ತಂಜಾವೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ನೆಡುಮಾರನ್ ಎಲ್‌ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಜೀವಂತವಾಗಿದ್ದಾರೆ. ಇದಲ್ಲದೆ, ಅವರು ಆರೋಗ್ಯವಂತರು. ಶೀಘ್ರದಲ್ಲೇ ಅವರು ಜನರ ಮುಂದೆ ಬರಲಿದ್ದಾರೆ. ತಮಿಳು ಜನರಿಗೆ ಈ ಶುಭ ಸುದ್ದಿಯನ್ನು ತಿಳಿಸಲು ನನಗೆ ಹೆಮ್ಮೆಯಾಗುತ್ತಿದೆ. ಪ್ರಭಾಕರನ್ ಕುರಿತ ಎಲ್ಲಾ ವದಂತಿಗಳಿಗೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ನೆಡುಮಾರನ್ ಹೇಳಿದ್ದಾರೆ.
ಪ್ರಭಾಕರನ್ ಅವರು ಅವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿರುವ ನೆಡುಮಾರನ್ ಅವರ ಆಶಯದಂತೆ ಈ ವಿಷಯವನ್ನು ಬಹಿರಂಗಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಮೇ 2009 ರಲ್ಲಿ, ಶ್ರೀಲಂಕಾ ಸೇನೆಯು ಎಲ್ ಟಿಟಿಇ ಚಟುವಟಿಕೆಗಳ ವಿರುದ್ಧ ಶ್ರೀಲಂಕಾ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಭಾಕರನ್ ಕೊಲ್ಲಲ್ಪಟ್ಟಿದ್ದಾರೆ ಎಂದು ಘೋಷಿಸಿತು. ಇದಕ್ಕೆ ಸಂಬಂಧಿಸಿದ ವಿಡಿಯೋಗಳನ್ನೂ ಆ ಸಮಯದಲ್ಲಿ ಬಿಡುಗಡೆ ಮಾಡಲಾಗಿತ್ತು. ಡಿಎನ್‌ಎ ಪರೀಕ್ಷೆಗಳು ಕೂಡ ಈ ವಿಷಯವನ್ನು ದೃಢಪಡಿಸಿವೆ ಎಂದು ಶ್ರೀಲಂಕಾ ಸರ್ಕಾರ ಹೇಳಿದೆ.
ಇದನ್ನೂ ಓದಿ: ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ, ಓರ್ವನ ಬಂಧನ: ಆರೋಪಿಯ ಮಾತು ಕೇಳಿ ದಂಗಾದ ಪೊಲೀಸರು