Advertisement

25 ವರ್ಷಗಳ ನಂತರ ಜೆಡಿಎಸ್‌ಗೆ ಒಲಿದ ಕೇಂದ್ರ ಮಂತ್ರಿ ಭಾಗ್ಯ

12:34 AM Jun 10, 2024 | Team Udayavani |

ನವದೆಹಲಿ: ನರೇಂದ್ರ ಮೋದಿ ಅವರ 3ನೇ ಅಧಿಕಾ ರಾವಧಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಂಪುಟ ಸಚಿವ ಸ್ಥಾನ ದೊರೆತಿದೆ. ಈ ಮೂಲಕ 25 ವರ್ಷಗಳ ಬಳಿಕ ಜೆಡಿಎಸ್‌ ನಾಯಕರೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ಒಲಿದಂತಾಗಿದೆ.

Advertisement

ಜೆಡಿಎಸ್‌ ರಾಷ್ಟ್ರಾಧ್ಯಕ್ಷ, ಸಂಸದ ಎಚ್‌.ಡಿ. ದೇವೆಗೌಡ ಅವರು 1996-97ರ ಅವಧಿಯಲ್ಲಿ ಪ್ರಧಾನಮಂತ್ರಿಗಳಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನೂ ತಮ್ಮ ಬಳಿ ಇರಿಸಿಕೊಂಡು, ಕಾರ್ಯನಿರ್ವಹಿಸಿದ್ದರು. ಅದೇ ರೀತಿ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಸ್‌.ಆರ್‌. ಬೊಮ್ಮಾಯಿ, ಸಿ.ಎಂ.ಇಬ್ರಾಹಿಂ ದೇವೇಗೌಡ ಪ್ರಧಾನಿಯಾದ ಸಂದರ್ಭದಲ್ಲಿ ಕೇಂದ್ರದಲ್ಲಿ ಸಚಿವರಾಗಿದ್ದರು. ನಂತರದ ವರ್ಷಗಳಲ್ಲಿ ಜೆಡಿಎಸ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರೂ ಯಾರಿಗೂ ಸಚಿವ ಸ್ಥಾನ ಲಭಿಸಿರಲಿಲ್ಲ.

ಪ್ರಸಕ್ತ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. 3 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್‌ 2ರಲ್ಲಿ ಜಯಸಾಧಿಸಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಲಭಿಸಿದೆ. ಜೆಡಿಎಸ್‌ ಎನ್‌ಡಿಎ ಒಕ್ಕೂಟದ ಪ್ರಮುಖ ಮಿತ್ರಪಕ್ಷವಾಗಿದ್ದು, ಸಚಿವ ಸ್ಥಾನ ದೊರೆಯುವ ಮೂಲಕ ಬರೊಬ್ಬರಿ 25 ವರ್ಷಗಳ ನಂತರ ಜೆಡಿಎಸ್‌ಗೆ ಈ ಭಾಗ್ಯ ಒಲಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next