ಲಕ್ನೋ: ಹಜರತ್‌ಗಂಜ್‌ನಲ್ಲಿ ಬಹುಮಹಡಿ ವಸತಿ ಕಟ್ಟಡ ಕುಸಿದ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಅವಶೇಷಗಳಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ಸಿಬಂದಿ ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಇದುವರೆಗೆ ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸುದ್ದಿಗಾರರಿಗೆ ಹೇಳಿದ್ದಾರೆ.
ವಜೀರ್ ಹಸನ್ ರಸ್ತೆಯಲ್ಲಿ ಸಂಭವಿಸಿದ ಕುಸಿತವು ಹಿಂದಿನ ದಿನ ಭೂಕಂಪದಿಂದ ಸಂಭವಿಸಿದೆಯೇ ಎಂಬ ಪ್ರಶ್ನೆಗೆ ಲಕ್ನೋ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೂರ್ಯಪಾಲ್ ಗಂಗ್ವಾರ್, “ಈಗ ಏನನ್ನೂ ಹೇಳಲಾಗುವುದಿಲ್ಲ” ಎಂದು ಪಿಟಿಐಗೆ ತಿಳಿಸಿದ್ದಾರೆ.
ಏತನ್ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಆಸ್ಪತ್ರೆಗಳಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.