Advertisement

ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?

01:51 PM Aug 09, 2021 | Team Udayavani |

ಮುಂಬೈ : ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ತಾಯಿ-ಮಗಳು ಬಂಧನದ ಭೀತಿಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Advertisement

ಶಿಲ್ಪಾ ಶೆಟ್ಟಿ ಅವರು ಇವೋಸಿಸ್​ ವೆಲ್​ನೆಸ್​ ಫಿಟ್ನೆಸ್​ ಕೇಂದ್ರ ನಡೆಸುತ್ತಿದ್ದಾರೆ. ಇದಕ್ಕೆ  ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು   ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಒಂದು ವೇಳೆ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಮೋಸ ಮಾಡಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕರೆ, ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ಅವರು ಈಗಾಗಲೇ ಜೈಲಿನಲ್ಲಿದ್ದಾರೆ. ನೀಲಿ ಸಿನಿಮಾ ನಿರ್ಮಾಣ ಹಾಗೂ ಹಂಚಿಕೆ ಆರೋಪದಡಿ ಅವರನ್ನು ಜುಲೈ 19 ರಂದು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಶಿಲ್ಪಾ ಶೆಟ್ಟಿಯವರನ್ನು ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಕಷ್ಟದಲ್ಲಿ ಹೊರಬರುವ ಮುನ್ನವೆ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಇದೀಗ ಮತ್ತೊಂದು ಸಮಸ್ಯೆ ಒಂದೊದಗಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next