Advertisement

ಚಂದ್ರಗ್ರಹಣ: ಹೊರನಾಡು, ಶೃಂಗೇರಿಯಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆಯಲ್ಲಿ ಬದಲಾವಣೆ

10:29 AM Nov 08, 2022 | Team Udayavani |

ಚಿಕ್ಕಮಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಂಗಳವಾರ (ನ.8) ಹೊರನಾಡು, ಶೃಂಗೇರಿ ದೇವಸ್ಥಾನಗಳಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ.

Advertisement

ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಮಾತ್ರ ಪ್ರಸಾದದ ವ್ಯವಸ್ಥೆ ಇರಲಿದೆ. 12 ಗಂಟೆ ನಂತರ ಮತ್ತೆ ಪ್ರಸಾದ ಇರುವುದಿಲ್ಲ. ಮಧ್ಯಾಹ್ನ 1.30ಕ್ಕೆ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ನಡೆಯಲಿದ್ದು, ಸಂಜೆ 4 ಗಂಟೆವರೆಗೆ ಅರ್ಚನೆ ನಡೆಯಲಿದೆ.

ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ದಿ ಕಾರ್ಯದ ನಂತರವೇ ಪೂಜೆ-ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗ್ರಹಣ ಆರಂಭದಿಂದ ಅಂತ್ಯದವರೆಗೂ ಅನ್ನಪೂರ್ಣೇಶ್ವರಿಗೆ ನಿರಂತರ ಅಭಿಷೇಕ ಇರಲಿದೆ.

ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯಲಿದ್ದು, ಗ್ರಹಣದ ವೇಳೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಆದರೆ ಮಧ್ಯಾಹ್ನದ ಊಟ, ಪೂಜೆ-ಪ್ರಸಾದ ಸೇರಿದಂತೆ ಯಾವುದೇ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಗ್ರಹಣದ ಬಳಿಕ ಪೂಜೆ-ಪ್ರಸಾದ ಎಂದಿನಂತೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next