ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಚಿವರು, ಶಾಸಕರು, ಸಂಸದರಿಗೆ ಆಹ್ವಾನ ನೀಡಲಾಗಿದೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಇದಕ್ಕಾಗಿ ಭಾರಿ ಸಿದ್ಧತೆ ನಡೆಸಲಾಗಿದೆ. ಬೃಹತ್ ಶಾಮಿಯಾನ ಹಾಕಲಾಗಿದ್ದು, ಉತ್ತರ ಕರ್ನಾಟಕ ಶೈಲಿಯ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:ಇಂದು ಸಂಜೆ ಅಮಿತ್ ಶಾ ಭೇಟಿಯಾಗಲಿರುವ ಬಿಎಸ್ ವೈ: ಮಹತ್ವದ ಚರ್ಚೆ
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಆಯ್ದ ಪ್ರಮುಖರೂ ಈ ಭೋಜನ ಕೂಟದಲ್ಲಿ ಭಾಗಿಯಾಗುವರು. ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.