Advertisement

 ಕಾರಾಗೃಹದಲ್ಲಿ  ಐಷಾರಾಮಿ ಸೌಲಭ್ಯ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ

12:48 AM Jan 25, 2019 | |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾ ನಟರಾಜನ್‌ಗೆ ಐಷಾರಾಮಿ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂ. ಲಂಚ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಹಾಗೂ ಎಸಿಬಿಗೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ.

Advertisement

ಪ್ರಕರಣದ ಸಂಬಂಧ ಎಸಿಬಿ ದಾಖಲಿಸಿರುವ ಎಫ್‌ಐಆರ್‌ ರದ್ದುಕೋರಿ ರಾಜ್ಯ ಬಂಧೀಖಾನೆ ಇಲಾಖೆ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಅಲೋಕ್‌ ಆರಾಧೆ ನೇತೃತ್ವದ ಏಕಸದಸ್ಯ ನ್ಯಾಯಪೀಠಕ್ಕೆ ‘ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ಹಾಗೂ ಎಸಿಬಿ ಪರ ವಕೀಲರು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಿತು.
 

Advertisement

Udayavani is now on Telegram. Click here to join our channel and stay updated with the latest news.

Next