Advertisement

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾದ ಎಂ.ಡಿ.ಲಕ್ಷ್ಮೀನಾರಾಯಣ್

04:30 PM Aug 22, 2022 | Vishnudas Patil |

ಬೆಂಗಳೂರು: ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ್ ಅವರು ಕಾಂಗ್ರೆಸ್ ಪಕ್ಷ ತೊರೆಯುವುದು ಬಹುತೇಕ ಖಚಿತ ವಾಗಿದೆ.

Advertisement

ಲಕ್ಷ್ಮೀನಾರಾಯಣ್ ಅವರು ಶಾಸಕರ ಭವನದಲ್ಲಿ ಆಪ್ತರ ಜೊತೆ ಸಭೆ ಮಾಡುತ್ತಿದ್ದಾರೆ.  ಮರಳಿ ಬಿಜೆಪಿ ಸೇರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಲಕ್ಷ್ಮೀನಾರಾಯಣ್ ಅವರು ಇತ್ತೀಚೆಗೆ ಬಹಿರಂಗವಾಗಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದರು. ಪರಿಷತ್ ಟಿಕೆಟ್ ಸಿಗದೇ ಇದ್ದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಒಂದು ಕಾಲದಲ್ಲಿ ಬಿಎಸ್ ಯಡಿಯೂರಪ್ಪ ಅವರ ಅತ್ಯಾಪ್ತ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮೀನಾರಾಯಣ್ ಈಗ ಮತ್ತೆ ಮರಳಿ ಗೂಡು ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next