Advertisement

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

08:27 PM Oct 18, 2021 | Team Udayavani |

ಬೆಂಗಳೂರು: ಕುಮಟಾ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಕರ್ಕಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದಲ್ಲಿ ಜನಸಂಘ ಮತ್ತು ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಕರ್ಕಿಯವರ ಪಾತ್ರ ಮಹತ್ವದ್ದಾಗಿತ್ತು. ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಯಲ್ಲಿ ಇವರು ಮಾಡಿರುವ ಸೇವೆ ಅನುಕರಣೀಯ. ಕರ್ಕಿ ಅವರ ನಿಧನದಿಂದ ಸಂಘಪರಿವಾರ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಆ ದೇವರಲ್ಲಿ ಕೋರುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪನ : ಭಯಗೊಂಡು ಮನೆಯಿಂದ ಹೊರ ಓಡಿದ ಜನ

Advertisement

Udayavani is now on Telegram. Click here to join our channel and stay updated with the latest news.

Next