Advertisement

ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

12:15 PM Apr 01, 2021 | Team Udayavani |

ಬೆಂಗಳೂರು: ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ,

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ ಎಂದು ಅಸ‌ಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ

ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಅದಕ್ಕೂ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ.  ಹಾಗಾಗಿ ವಿಧಿಯಿಲ್ಲದೆ ಸಿಎಂರನ್ನು ಭೇಟಿ ಮಾಡಬೇಕಾಯ್ತು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next