Advertisement

ಮಾಜಿ ಕೇಂದ್ರ ಸಚಿವ ಎಂ. ವಿ. ರಾಜಶೇಖರನ್ ನಿಧನ: ಮುಖ್ಯಮಂತ್ರಿ ಸಂತಾಪ

09:09 AM Apr 14, 2020 | keerthan |

ಬೆಂಗಳೂರು: ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಎಂ. ವಿ. ರಾಜಶೇಖರನ್ ಅವರು ಸೋಮವಾರ ನಿಧನ ಹೊಂದಿದ್ದಾರೆ.

Advertisement

92 ವರ್ಷ ವಯಸ್ಸಿನ ರಾಜಶೇಖರ್ ಅವರು ಕಳೆದ ಕೆಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ರಾಜಶೇಖರನ್ ಅವರು ಡಾ.  ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಂ. ವಿ. ರಾಜಶೇಖರನ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಅವರು ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು.

Advertisement

ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು

ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.

ಮೌಲ್ಯಾಧಾರಿತ ರಾಜಕಾರಣದಿಂದಾಗಿಯೆ ಗುರುತಿಸಿಕೊಂಡಿದ್ದರು. ಅವರ ನಿಧನ ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next