ಹಿರೇಕೆರೂರ: ಹಾದ್ರಿಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೃಷಿ ಯಾಂತ್ರಿಕರಣ ತರಬೇತಿ ಕಾರ್ಯಕ್ರಮ ನಡೆಯಿತು.
ಯೋಜನೆಯ ಕೃಷಿ ಯಂತ್ರಧಾರೆಯ ಪ್ರಬಂಧಕ ಸತೀಶ ಮಾತನಾಡಿ, ಆಧುನಿಕ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯ ಮತ್ತು ಅವಶ್ಯಕವಾಗಿದೆ. ಯೋಜನೆಯ ಕೃಷಿ ಯಂತ್ರಧಾರೆ ಕೇಂದ್ರದಿಂದ ಕೃಷಿ ಯಂತ್ರೋಪಕರಣಗಳು ಬಾಡಿಗೆ ರೂಪದಲ್ಲಿ ಲಭ್ಯವಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಕೃಷಿ ಯಂತ್ರೋಪಕರಣಗಳು ಮತ್ತು ಅವುಗಳ ಬಾಡಿಗೆ ದರಗಳು ರೈತರ ನೋಂದಾವಣೆ ಮತ್ತು ರೈತರಿಗೆ ಕೇಂದ್ರದಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕ ಕೆ.ಎಸ್.ಅಣ್ಣಪ್ಪ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರಗತಿ ಬಂಧು ತಂಡಗಳ ರಚನೆ ಮಾಡಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ರೈತರು ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಕೃಷಿಯನ್ನು ಲಾಭದಾಯಕವನ್ನಾಗಿಸಿಕೊಳ್ಳಬೇಕು ಎಂದರು.
ಕೃಷಿ ವಿಭಾಗಕ್ಕೆ ಯೋಜನೆಯಿಂದ ಸಿಗುವ ಸಾಲ ಸೌಲಭ್ಯ, ಅನುದಾನಗಳು, ಕೃಷಿ ತರಬೇತಿಗಳು ವಿವಿಧ ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ಖರೀದಿಗೆ ಸಿಗುವ ಅನುದಾನಗಳು ಕೃಷಿ ಸ್ವ-ಉದ್ಯೋಗ ತರಬೇತಿಗಳು, ಸಿರಿಧಾನ್ಯ ಬೆಳೆಗಳು ಪುಷ್ಪ ಕೃಷಿ, ತರಕಾರಿ ಕೃಷಿ ಹೈನುಗಾರಿಕೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಕಿರಣ್‌ಕುಮಾರ್, ಹಾದ್ರಿಹಳ್ಳಿ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಆರೀಕಟ್ಟಿ, ಜಿಪಂ ಮಾಜಿ ಸದಸ್ಯೆ ಸುಲೋಚನಾ ಮರಿಗೌಡ್ರ, ಶಿಲ್ಪಾ ಮಳವಳ್ಳಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.
ಸವಿತಾ ಮಳವಳ್ಳಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಕವಿತಾ ಜೋಗಿಹಳ್ಳಿ ವಂದಿಸಿದರು.