Advertisement

Mad Love; 8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಬಸ್ ಚಾಲಕ ಆತ್ಮಹತ್ಯೆ!

09:06 PM Jan 01, 2024 | Team Udayavani |

ಚಿಕ್ಕಮಗಳೂರು: ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ.

Advertisement

ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್  ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು.

ಭಾನುವಾರ ರಾತ್ರಿ ವಿದ್ಯಾರ್ಥಿನಿ ಸ್ನೇಹಿತೆಯರ ಜತೆ ನ್ಯೂ ಇಯರ್ ಪಾರ್ಟಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಬಂದಿದ್ದಳು. ಈ ವೇಳೆ ಸಂತೋಷ್ ಆಕೆಯನ್ನು ಕರೆದೊಯ್ದು ಮಧ್ಯರಾತ್ರಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೂರು ನೀಡಿದರೂ ಕ್ರಮ ಕೈಗೊಳ್ಳದ ಶಾಲಾ ಆಡಳಿತ ಮಂಡಳಿ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next