ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ನಿಯಮಿತದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗೆ ಮತ್ತೆ ಬಂಧನದ ಬೀತಿ ಎದುರಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ:ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ
ಇದೇ ಪ್ರಕರಣದಲ್ಲಿ ಮಾ.7 ರಂದು ಶಾಸಕ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಶಾಸಕರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.