Advertisement

Madapadi: ಆತ್ಮಹತ್ಯೆಗೆ ಯತ್ನಿಸಿದ ವೃದ್ಧ;ಆಸ್ಪತ್ರೆಗೆ ದಾಖಲು

07:09 PM Aug 14, 2024 | Team Udayavani |

ಗುತ್ತಿಗಾರು: ವೃದ್ಧರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಮಡಪ್ಪಾಡಿಯಿಂದ ವರದಿಯಾಗಿದೆ.

Advertisement

ಇಲ್ಲಿನ ವಾಲ್ತಾಜೆ ನಿವಾಸಿ ಬಾಲಕೃಷ್ಣ ಗೌಡ (72) ಆತ್ಮಹತ್ಯೆಗೆ ಯತ್ನಿಸಿದವರು.

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಮನೆಯವರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next