ಕೋಟ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.3ರಂದು ಕೋಟ ಕಾರಂತ ಕಲಾಭವನದಲ್ಲಿ ಸಾಧಕರೊಂದಿಗೆ ಸಂವಾದ, ಕವಿಗೋಷ್ಠಿ, ಹಿರಿಯ ಮದ್ದಳೆವಾದಕ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯಡ್ಕ ಗೋಪಾಲರಾಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಿತು.
ದ.ಕ. ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವೃತ್ತಿ ಮತ್ತು ಪ್ರವೃತ್ತಿಗಳು ಸೇರಿದಾಗ ಒಳ್ಳೆಯ ಪ್ರತಿಭೆ ಹುಟ್ಟಲು ಸಾಧ್ಯ. ಇದಕ್ಕೆ ಸ್ಪಷ್ಟ ಉದಾಹರಣೆ ಹಿರಿಯಡ್ಕ ಗೋಪಾಲರಾಯರು. ಇವರು ತನ್ನ 98ನೇ ವಯಸ್ಸಿನಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಮದ್ದಳೆ ಬಾರಿಸುತ್ತಿರುವುದು ನಿಜಕ್ಕೂ ಅದ್ಭುತ. ಏರು ಮದ್ದಳೆಯಲ್ಲಿ ಇವರನ್ನು ಮೀರಿಸುವವರು ಯಾರೂ ಇಲ್ಲ ಎಂದರು.
ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಯಕ್ಷಗಾನ ವಿದ್ವಾಂಸ ರಾಘವ ನಂಬಿಯಾರ್, ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಸದಸ್ಯ ಪಿ.ಕಿಶನ್ ಹೆಗ್ಡೆ, ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅನಂತಪದ್ಮನಾಭ ಕಡೇಕಾರ್, ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಎೆಚ್.ಪ್ರಮೋದ್ ಹಂದೆ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯಡ್ಕ ಗೋಪಾಲರಾಯರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು ಹಾಗೂ ಅವರೊಂದಿಗೆ ಮುಖಾ-ಮುಖೀ, ಹಿರಿಯ ಸಾಹಿತಿ ಡಾ.ನಾ.ಮೊಗಸಾಲೆ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕಾರ್ಕಳದ ಸಾಹಿತಿ ಜ್ಯೋತಿ ಗುರುಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಕನ್ಯಾ ಕಳಸ, ಕೋಟನರೇಂದ್ರ ಕುಮಾರ್, ಸುಜಯೀಂದ್ರ ಹಂದೆ, ಪಾರಂಪಳ್ಳಿ ನರಸಿಂಹ ಐತಾಳ್, ತಾರಾನಾಥ್ ಜೆ.ಮೇಸ್ತಾ, ಶಿವರಾಮ ಕೆ.ಕೆ ಸಹಿತ ಹಲವು ಮಂದಿ ಕವಿಗಳು ಉಪಸ್ಥಿತರಿದ್ದರು. ಸಾ„ಬರಕಟ್ಟೆ ಅಕ್ಷಯ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಸುರೇಶ್ ಕಾರ್ಕಳ ಮತ್ತು ಬಳಗವರಿಂದ ನƒತ್ಯ ಗಾನ ವೈಭವ ಜರಗಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಯ್ಯ ಸ್ವಾಗತಿಸಿ, ಪೂರ್ಣಿಮ ಸಮ್ಮಾನ ಪತ್ರ ವಾಚಿಸಿ, ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿ, ನರೇಂದ್ರ ಕುಮಾರ್ ಕೋಟ ವಂದಿಸಿದರು.