ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ.
Advertisement
ಈ ಮಧ್ಯೆ, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಲ್. ಆರ್. ಶಿವರಾಮೇಗೌಡ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಶಿವರಾಮೇಗೌಡರನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಸೇರಿ ಮುಖಂಡರು ಪಾಲ್ಗೊಂಡಿದ್ದರು. ಲಕ್ಷ್ಮೀ ಅಶ್ವಿನ್‌ಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ರಾಜಕೀಯ ಸನ್ನಿವೇಶ ಹಾಗೂ ಸೂಕ್ಷ್ಮತೆಗಳ ಹಿನ್ನೆಲೆಯಲ್ಲಿ ಶಿವರಾಮೇಗೌಡರನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಲಕ್ಷ್ಮೀ ಅಶ್ವಿನ್ ಗೌಡರಿಗೆ ಅಸಮಾಧಾನವಾಗಿದ್ದು, ದೇವೇಗೌಡರು ಈ ಅಸಮಾಧಾನ ತಣಿಸುವ ಕೆಲಸ ಮಾಡಿದ್ದಾರೆ.
ದೇವೇಗೌಡರು ತುರ್ತು ಬುಲಾವ್ ನೀಡಿದ್ದಾರೆ. ಅದರಂತೆ ಭಾನುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಲಿರುವ
ಮಧು ಬಂಗಾರಪ್ಪ ಸೋಮವಾರ ಬೆಳಿಗ್ಗೆ ದೇವೇಗೌಡರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಬಿ-ಫಾರಂ ಪಡೆದು, ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾರ್ಯಕರ್ತರಿಗೆ ಎಚ್‌ಡಿಡಿ “ಫರ್ಮಾನು’
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಜತೆಗೆ ಸಿಎಂ ಕುಮಾರಸ್ವಾಮಿ ಅವರು ನಡೆಸಿದ ಮಾತುಕತೆಯಂತೆ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಿ, ಐದೂ ಕ್ಷೇತ್ರಗಳನ್ನು ಗೆದ್ದುಕೊಳ್ಳಬೇಕು. ಆ ಮೂಲಕ ಸಮ್ಮಿಶ್ರ ಸರ್ಕಾರದ ಶಕ್ತಿ ಪ್ರದರ್ಶನ ಮಾಡಬೇಕು. ಅದಕ್ಕಾಗಿ “ಕಾಯಾ-ವಾಚಾ-ಮನಸಾ’ ದುಡಿಯುವಂತೆ ಕಾರ್ಯಕರ್ತರಿಗೆ ದೇವೇಗೌಡರು ಫೋನ್‌ಮಾಡಿ “ಫರ್ಮಾನು’ ಹೊರಡಿಸಿದರು ಎನ್ನಲಾಗಿದೆ.
Related Articles
Advertisement
ಮುಖಂಡರೊಂದಿಗೆ ಚರ್ಚೆ: ಇದೇ ವೇಳೆ, ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್ ಕಣಕ್ಕಿಳಿಯುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರನ್ನು ಭಾನುವಾರ ತಮ್ಮ ನಿವಾಸಕ್ಕೆ ಕರೆಸಿಕೊಂಡು ದೇವೇಗೌಡರು ಮಾತುಕತೆ ನಡೆಸಿದರು.
ಕಣ್ಣೀರಿಟ್ಟಿ ಲಕ್ಷ್ಮೀ ಅಶ್ವಿನ್ಗೌಡಕೊನೇ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಲಕ್ಷ್ಮೀ ಅಶ್ವಿನ್‌ಗೌಡ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಈ ವೇಳೆ
ಅವರನ್ನು ಸಮಾಧಾನಪಡಿಸಿದ ದೇವೇ ಗೌಡರು, ರಾಜಕೀಯವಾಗಿ ಸೂಕ್ಷ್ಮ ವಿಚಾರ ಆಗಿರುವುದರಿಂದ ಶಿವರಾಮೇ ಗೌಡರನ್ನು ಆಯ್ಕೆ ಮಾಡಲಾಗಿದೆ. ನಿಮಗಿನ್ನೂ ಚಿಕ್ಕ ವಯಸ್ಸು, ಶಿವರಾಮೇಗೌಡರಿಗೆ ವಯಸ್ಸಾಗಿದೆ. ಹಾಗಾಗಿ, ಉಪಚುನಾವಣೆಯಲ್ಲಿ
ಅವರಿಗೆ ಅವಕಾಶ ಕೊಡೋಣ. ಮುಂದಿನ ಚುನಾವಣೆಯಲ್ಲಿ ನಿಮಗೆ ಟಿಕೆಟ್ ನೀಡಲಾಗುವುದು ಎಂದು ಅಭಯ ನೀಡಿದರು. ಆದರೂ, ಅಶ್ವಿನ್ ಗೌಡ ಕಣ್ಣೀರಿಡುತ್ತಲೇ ಗೌಡರ ನಿವಾಸದಿಂದ ಹೊರ ಬಂದರು. ಈ ಮಧ್ಯೆ, ಎಲ್.ಆರ್.ಶಿವರಾಮೇಗೌಡ ಅವರು, ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು. ಯಾವುದೇ ಗೊಂದಲವಿಲ್ಲದೆ ಸರ್ವಾನುಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಪಕ್ಷದ ಎಲ್ಲ ಮುಖಂಡರ ಸಮ್ಮುಖದಲ್ಲಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ.
● ಎಲ್.ಆರ್. ಶಿವರಾಮೇಗೌಡ, ನಿಯೋಜಿತ ಅಭ್ಯರ್ಥಿ. ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ದೆಹಲಿಗೆ ತೆರಳುತ್ತಿರುವುದರಿಂದ ದೇವೇಗೌಡರು ಇರಲ್ಲ. ಉಳಿದಂತೆ ಮುಖ್ಯಮಂತ್ರಿ ಸೇರಿ ಪಕ್ಷದ ಎಲ್ಲ ಮುಖಂಡರು ಭಾಗಿಯಾಗುತ್ತಾರೆ. ಬಿಜೆಪಿ ಅಭ್ಯರ್ಥಿ ಯಾರೇ ಆಗಲಿ, ಜನ ನಮ್ಮ ಪರವಾಗಿ ಇದ್ದಾರೆ. ನಮಗೆ ಆಶಿರ್ವಾದ ಮಾಡುತ್ತಾರೆ.
● ಅನಿತಾ ಕುಮಾರಸ್ವಾಮಿ, ನಿಯೋಜಿತ ಅಭ್ಯರ್ಥಿ. ದೇವೇಗೌಡ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಆಕಾಂಕ್ಷಿಗಳ ಸಭೆ ನಡೆಸಲಾಯಿತು. ಅಂತಿಮವಾಗಿ ಶಿವರಾಮೇಗೌಡರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ. ಯಾವುದೇ ಗೊಂದಲಗಳಿಲ್ಲ. ಲಕ್ಷ್ಮೀ ಅಶ್ವಿನಿಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ.
● ಸಿ.ಎಸ್. ಪುಟ್ಟರಾಜು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ.