Advertisement
ಇತ್ತೀಚೆಗೆ ಚಿತ್ರದುರ್ಗದಲ್ಲಿ ಮಾತನಾಡಿದ್ದ ಬಿ.ವೈ.ವಿಜಯೇಂದ್ರ, ಶಿಕ್ಷಣ ಸಚಿವರಿಗೆ ನೀಟಾಗಿ ಕಟಿಂಗ್ ಮಾಡಿಸಿಕೊಂಡು, ಎಣ್ಣೆ ಹಚ್ಚಿ ತಲೆ ಬಾಚಿಕೊಂಡು ಬನ್ನಿ ಎಂದು ಹೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದರು.
ಇಷ್ಟು ದಿನ ಶಿಕ್ಷಣ ಕ್ಷೇತ್ರ ಹೊಲಸು ಮಾಡಿದ್ದು ಬಿಜೆಪಿಯವರು. ಶಿಕ್ಷಣದ ಪವಿತ್ರತೆ ಕಾಪಾಡುವ ಕೆಲಸ ನಾವು ಮಾಡಿದ್ದೇವೆ ಎಂದು ಸಿ.ಟಿ.ರವಿ ಹೇಳಿಕೆಗೆ ತಿರುಗೇಟು. ಚನ್ನಗಿರಿ ಗಲಭೆ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ. ಬಿಜೆಪಿ ವಿರೋಧಕ್ಕಾಗಿ ವಿರೋಧ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Related Articles
Advertisement
ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಆಗಿಲ್ಲ. ಫಲಿತಾಂಶದ ಗುಣಮಟ್ಟ ಹೆಚ್ಚುಕಡಿಮೆ ಆಗಿದೆ . 9 ವರ್ಷದಿಂದ ಶಿಕ್ಷಕರ ನೇಮಕ ಆಗಿಲ್ಲ. ಆದಷ್ಟು ಬೇಗ ಎಷ್ಟು ಸಾಧ್ಯವೋ ಅಷ್ಟು ನೇಮಕ ಮಾಡಿಕೊಳ್ಳುತ್ತೇವೆ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಇತರರಿದ್ದರು.
ಇದನ್ನೂ ಓದಿ: Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ