Advertisement

ಭದ್ರಾ ಜಲಾಶಯ: ನಾಲ್ಕು ಹಂತದಲ್ಲಿ 47 ದಿನ ಕಾಲುವೆಗೆ ನೀರು; ಸಚಿವ ಮಧು ಬಂಗಾರಪ್ಪ

05:13 PM Jan 06, 2024 | Team Udayavani |

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

Advertisement

ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ಮಾತನಾಡಿದರು.

ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ.

ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ಸ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ಸ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ ಎಂದರು.

Advertisement

ಇದನ್ನೂ ಓದಿ: Cricket: ರಣಜಿ ಪಂದ್ಯ ಆಡಲು ಮೈದಾನಕ್ಕೆ ಆಗಮಿಸಿದ ಒಂದೇ ರಾಜ್ಯದ ಎರಡು ತಂಡಗಳು! ಕಾರಣವೇನು?

Advertisement

Udayavani is now on Telegram. Click here to join our channel and stay updated with the latest news.

Next