Advertisement

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

12:22 AM May 21, 2024 | Team Udayavani |

ಉಡುಪಿ: ವಿಧಾನ ಪರಿಷತ್‌ ಚುನಾವಣೆಯನ್ನು ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸಿ ದ್ದು ಆರೂ ಕ್ಷೇತ್ರಗಳಲ್ಲಿ ಸಂಘಟಿತ ಪ್ರಯತ್ನದಿಂದ ಗೆಲ್ಲಲಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ನೈಋತ್ಯ ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವ ಸಿದ್ಧತ ಸಭೆಯಲ್ಲಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆ ಯಲ್ಲಿ ಶಿವಮೊಗ್ಗ, ಉಡುಪಿ- ಚಿಕ್ಕಮ ಗಳೂರು ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯ ಸಾಧಿಸಲಿದೆ ಎಂದರು.

ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಪದವೀಧರ ಕ್ಷೇತ್ರ ಅಭ್ಯರ್ಥಿ ಆಯನೂರು ಮಂಜುನಾಥ್‌, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ| ಕೆ.ಕೆ. ಮಂಜುನಾಥ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ. ಮಾಜಿ ಶಾಸಕ ಗೋಪಾಲ ಪೂಜಾರಿ, ಮಾಜಿ ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಮತ್ತಿತರರು ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next