ಮಧುಗಿರಿ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲಿನರ್ ಸ್ಥಳದಲ್ಲೇ ಸಾವನ್ನಪಿದ ಘಟನೆ ಮಂಗಳವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಈರೇಶ್ (45) ಎನ್ನಲಾಗಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಡೆಗೊಂಡನಹಳ್ಳಿ ಬಳಿ ಘಟನೆ ಸಂಭವಿಸಿದ್ದು, ಮಧುಗಿರಿಯಿಂದ ಪಾವಗಡ ಕಡೆಗೆ ತೆರಳುತ್ತಿದ್ದ ಲಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಲಾರಿ ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಢಿಕ್ಕಿಯ ರಭಸಕ್ಕೆ ಒಂದು ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
ಇದನ್ನೂ ಓದಿ: ಪುತ್ತೂರು: ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ನಿಧನ