Advertisement

Madhur; ಖಾಸಗಿ ಶಾಲೆಯ ವ್ಯಾನ್‌ ಮರಕ್ಕೆ ಢಿಕ್ಕಿ

11:43 PM Jan 03, 2024 | Team Udayavani |

ಮಧೂರು: ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಾಲೆಯ ವ್ಯಾನ್‌ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಅಕೇಶಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

Advertisement

ಮಧೂರು ಕುಂಜಾರು ಕೊರತ್ತಿಕುಂಡ್‌ನ‌ಲ್ಲಿ ಅಪಘಾತ ಸಂಭವಿಸಿದೆ. ಹನಿ ಮಳೆಗೆ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ನಿಂತುಕೊಂಡ ಹಿನ್ನೆಲೆಯಲ್ಲಿ ಸಂಭವನೀಯ ದುರಂತ ತಪ್ಪಿತು.

ಮರಕ್ಕೆ ಢಿಕ್ಕಿ ಹೊಡೆದುದರಿಂದ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬೀಳುವುದು ತಪ್ಪಿತು. ಅಪಘಾತದಲ್ಲಿ ಬಸ್‌ನಲ್ಲಿದ್ದ 12 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರಿಗೆ ವಿದ್ಯಾನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next