Advertisement
224 ವಿಧಾನಸಭಾ ಕ್ಷೇತ್ರಗಳಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಪಡೆದಿದ್ದು, ನಿರೀಕ್ಷೆಗೂ ಮೀರಿ ಟಿಕೆಟ್‌ಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮಧುಸೂಧನ್ ಮಿಸ್ತ್ರಿ ಆಕಾಂಕ್ಷಿಗಳ ಸಾಮರ್ಥ್ಯ ಮತ್ತು ಅವರು ಸ್ಪರ್ಧಿಸುವ ಕ್ಷೇತ್ರಗಳ ಬಗ್ಗೆ ಅವರಿಗಿರುವ ಮಾಹಿತಿ ಪಡೆಯುವ ಪ್ರಯತ್ನ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ, ನೀವು ಯಾವ ಕ್ಷೇತ್ರದಿಂದ ಟಿಕೆಟ್ ಬಯಸಿದ್ದೀರಿ? ನಿಮ್ಮ ಕ್ಷೇತ್ರದ ಮತದಾರರ ಸಂಖ್ಯೆ ಎಷ್ಟು ? ನಿಮ್ಮ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ. ಅದರಲ್ಲಿಬಿಜೆಪಿ, ಕಾಂಗ್ರೆಸ್ ಸದಸ್ಯರ ಸಂಖ್ಯೆ ಎಷ್ಟು ? ನಿಮ್ಮ ಕ್ಷೇತ್ರದಲ್ಲಿ ಹಾಲಿ ಶಾಸಕರ ಬಗ್ಗೆ ಇರುವ ಅಭಿಪ್ರಾಯ ಏನು ? ಹಾಲಿ ಶಾಸಕ ಬಿಜೆಪಿಯವರಾಗಿದ್ದರೆ ಅವರನ್ನು ಸೋಲಿಸಲು ನಿಮ್ಮ ಬಳಿ ಯಾವ ಅಸ್ತ್ರವಿದೆ ? ಕ್ಷೇತ್ರದ ಜಾತಿ ಸಮೀಕರಣ ಹೇಗಿದೆ ? ಯಾವ ಜಾತಿಯ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ? ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ.
Related Articles
Advertisement
ಪದಾಧಿಕಾರಿಗಳ ಸಭೆ ಇಂದುಬೆಂಗಳೂರು: ಮೂರು ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಕರ್ನಾಟಕವನ್ನು ಮುಂದಿನ ಗುರಿಯಾಗಿಸಿಕೊಂಡಿರುವುದರಿಂದ ರಾಜ್ಯ ಕಾಂಗ್ರೆಸ್ ತಳ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಚುರುಕುಗೊಳಿಸಲು ತೀರ್ಮಾನಿಸಿದೆ. ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ, ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು, ಸರ್ಕಾರದ ಯೋಜನೆಗಳು ಹಾಗೂ ಪಕ್ಷದ ಸೂಚನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮತ್ತಷ್ಟು ತೀವ್ರಗತಿಯಲ್ಲಿ ಮಾಡುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸುವ ಸಾಧ್ಯತೆ ಇದೆ. ಪ್ರಮುಖವಾಗಿ ಬಿಜೆಪಿ ನಡೆಸುತ್ತಿರುವ ಅಪಪ್ರಚಾರ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳ ಬಗ್ಗೆ ಎಚ್ಚರದಿಂದ ಇರುವಂತೆ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿ ಅನಗತ್ಯ ವಿವಾದಗಳಲ್ಲಿ ಸಿಲುಕಿಕೊಳ್ಳದಂತೆ ಸಭೆಯಲ್ಲಿ ಕಿವಿ ಮಾತು ಹೇಳುವ ಸಾಧ್ಯತೆ ಇದೆ.